ಚೆನ್ನೈ: ಮೂರು ದಿನದ ಹಿಂದೆ ಮದುವೆಯಾಗಿದ್ದ ನವದಂಪತಿ ಅಪಘಾತದಲ್ಲಿ ದುರ್ಮರಣ
ಮೂರು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ದಂಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಮಪ್ಪೆಡು ಬಳಿಯ ಪೆರುಂಬಕ್ಕಂ-ಅರಕ್ಕೋಣಂ ರಸ್ತೆಯಲ್ಲಿ ನಡೆದಿದೆ.

ಚೆನ್ನೈ: ಮೂರು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ದಂಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಮಪ್ಪೆಡು ಬಳಿಯ ಪೆರುಂಬಕ್ಕಂ-ಅರಕ್ಕೋಣಂ ರಸ್ತೆಯಲ್ಲಿ ನಡೆದಿದೆ.
ಅರಕ್ಕೋಣಂನ ಎಂ.ಮನೋಜ್ ಕುಮಾರ್(31), ಚೆನ್ನೈನ ಪೆರುಂಬಕ್ಕಂನ ಕಾರ್ತಿಕಾ(30) ಮೃತ ನವದಂಪತಿಗಳು. ಇವರಿಬ್ಬರು ಮೂರು ದಿನಗಳ ಹಿಂದೆ ವಿವಾಹವಾಗಿದ್ದರು.
ದಂಪತಿ ಚೆನ್ನೈನಿಂದ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕಾಂಕ್ರೀಟ್ ಮಿಕ್ಸರ್ ಟ್ರಕ್ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದಿದೆ. ಕಾರು ನುಜ್ಜುಗುಜ್ಜಾಗಿದ್ದು, ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮಪ್ಪೇಡು ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳನ್ನು ಹೊರತೆಗೆಯಲು ಕೆಲ ಗಂಟೆಗಳ ಕಾಲ ಹರಸಾಹಸ ಪಡಬೇಕಾಯಿತು. ಟ್ರಾಫಿಕ್ ಕೂಡ ಅಸ್ತವ್ಯಸ್ತಗೊಂಡಿದ್ದು, ಒಂದು ಕಿಲೋಮೀಟರ್ ವರೆಗೂ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


