ದ್ವೇಷಕಾರಿ ಭಾಷಣ ಪ್ರಕರಣ: ಅಕ್ಬರುದ್ದೀನ್ ಓವೈಸಿ ನಿರ್ದೋಷಿ- ವಿಶೇಷ ನ್ಯಾಯಾಲಯ ತೀರ್ಪು
2004ರಲ್ಲಿ ದಾಖಲಾಗಿದ್ದ ದ್ವೇಷಕಾರಿ ಭಾಷಣ ಪ್ರಕರಣದಲ್ಲಿ ಎಐಎಂಐಎಂ ಮುಖಂಡ ಹಾಗೂ ಶಾಸಕ ಅಕ್ಬರುದ್ದೀನ್ ಓವೈಸಿ ವಿರುದ್ಧ ನಿರ್ದೋಷಿ ಎಂದು ವಿಶೇಷ ನ್ಯಾಯಾಲಯವೊಂದು ತೀರ್ಪು ನೀಡಿದೆ.

ಹೈದರಾಬಾದ್: 2004ರಲ್ಲಿ ದಾಖಲಾಗಿದ್ದ ದ್ವೇಷಕಾರಿ ಭಾಷಣ ಪ್ರಕರಣದಲ್ಲಿ ಎಐಎಂಐಎಂ ಮುಖಂಡ ಹಾಗೂ ಶಾಸಕ ಅಕ್ಬರುದ್ದೀನ್ ಓವೈಸಿ ವಿರುದ್ಧ ನಿರ್ದೋಷಿ ಎಂದು ವಿಶೇಷ ನ್ಯಾಯಾಲಯವೊಂದು ತೀರ್ಪು ನೀಡಿದೆ.
ಮಂಗಳವಾರ ಚುನಾಯಿತ ಪ್ರತಿನಿಧಿಗಳ ಮೇಲಿನ ಪ್ರಕರಣ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಓವೈಸಿ ವಿರುದ್ದದ ಆರೋಪದಲ್ಲಿ ತಪಿತಸ್ಥನಲ್ಲ ಎಂಬುದನ್ನು ಪತ್ತೆ ಹಚ್ಚಿದ್ದು, ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ.
2004ರ ಮಾರ್ಚ್ ನಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ಹೈದರಾಬಾದ್ ನಲ್ಲಿ ಅಕ್ಬರುದ್ದೀನ್ ಓವೈಸಿ ದ್ವೇಷಕಾರಿ ಭಾಷಣ ಮಾಡಿದ್ದ ಆರೋಪದ ಮೇರೆಗೆ ಆತನ ವಿರುದ್ಧ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಂಬಂಧಿತ ಐಪಿಸಿ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ತದನಂತರ ಪೊಲೀಸರು ಚಾರ್ಚ್ ಶೀಟ್ ಸಲ್ಲಿಸಿದ್ದರು.
ವಾದ, ವಿವಾದ ಆಲಿಸಿದ ನಂತರ, ಸಾಕ್ಷ್ಯಗಳ ಕೊರತೆಯಿಂದಾಗಿ ಓವೈಸಿ ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


