ಕೋರ್ಟ್ ಆದೇಶದಂತೆ ತನಿಖೆಗೆ ಸಹಕರಿಸುತ್ತೇನೆ: ಮುಂಬೈನಲ್ಲಿ ಪರಮ್ ಬೀರ್ ಸಿಂಗ್ ಹೇಳಿಕೆ
ಮುಂಬೈ ಕೋರ್ಟ್‌ನಿಂದ ಘೋಷಿತ ಅಪರಾಧಿ ಎಂದು ಕರೆಸಿಕೊಂಡಿರುವ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ನ್ಯಾಯಾಲಯದ ನಿರ್ದೇಶನದಂತೆ ತನಿಖೆಗೆ ಸಹಕಾರ ನೀಡಲು ಗುರುವಾರ ಮುಂಬೈಗೆ ಆಗಮಿಸಿದ್ದಾರೆ.

ಮುಂಬೈ: ಮುಂಬೈ ಕೋರ್ಟ್‌ನಿಂದ ಘೋಷಿತ ಅಪರಾಧಿ ಎಂದು ಕರೆಸಿಕೊಂಡಿರುವ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ನ್ಯಾಯಾಲಯದ ನಿರ್ದೇಶನದಂತೆ ತನಿಖೆಗೆ ಸಹಕಾರ ನೀಡಲು ಗುರುವಾರ ಮುಂಬೈಗೆ ಆಗಮಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಸುಲಿಗೆ ಪ್ರಕರಣದಲ್ಲಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಪರಮ್ ಬೀರ್ ಸಿಂಗ್ ಅವರು, ತಾವು ಚಂಡೀಗಡದಲ್ಲಿ ಇದ್ದುದ್ದಾಗಿ ಹೇಳಿದ್ದು, ನ್ಯಾಯಾಲಯದ ನಿರ್ದೇಶನದಂತೆ ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ.
ನ್ಯಾಯಾಲಯದ ಆದೇಶದಂತೆ ತನಿಖೆಗೆ ಸಹಕಾರ ನೀಡಲು ಮುಂಬೈಗೆ ಆಗಮಿಸಿದ್ದೇನೆ. ತನಿಖೆಗೆ ಸಹಕರಿಸುತ್ತೇನೆಂದು ತಿಳಿಸಿದ್ದಾರೆ.
ವಿಮಾನ ನಿಲ್ದಾಣದಿಂದ ಹೊರಬಂದ ಸಿಂಗ್ ಅವರು, ಮುಂಬೈ ಪೊಲೀಸ್ ಅಪರಾಧ ವಿಭಾಗದ ಘಟಕ -11 ರ ಮುಂದೆ ಇಂದು ಹಾಜರಾದರು,
ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂಬೈ ಪೊಲೀಸ್ ಆಯುಕ್ತ ಹುದ್ದೆಯಿಂದ ವರ್ಗಾವಣೆಯಾದ ಮತ್ತು ಆಗಿನ ಗೃಹ ಸಚಿವ ಅನಿಲ್ ದೇಶ್‌ಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ನಂತರ ಮೇ ತಿಂಗಳಿನಿಂದ ಅವರು ಕೆಲಸಕ್ಕೆ ಹಾಜರಾಗಿಲ್ಲ.
ಬಂಧನದಿಂದ ರಕ್ಷಣೆ ಕೋರಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆ ಬಳಿ ನಿಲ್ಲಿಸಿದ್ದ ಎಸ್‌ಯುವಿಯಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾದ ಬಳಿಕ ಮುಂಬೈ ಪೊಲೀಸ್ ಆಧಿಕಾರಿ ಸಚಿನ್ ವಾಜೆ ಅವರನ್ನು ಬಂಧಿಸಲಾಗಿತ್ತು. ಅನಂತರ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


