ದೇಶ

ಲಖೀಂಪುರ್ ಖೇರ್ ಹಿಂಸಾಚಾರ: ರೈತರನ್ನು ಕೆಣಕಿ, ಗುಂಡು ಹಾರಿಸಿದ ಕೇಂದ್ರ ಸಚಿವರ ಪುತ್ರ- ಎಫ್ ಐಆರ್ ನಲ್ಲಿ ಉಲ್ಲೇಖ

ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಕಾರಿನಲ್ಲಿ ಕುಳಿತಿದ್ದ ಕೇಂದ್ರ ಸಚಿವರ ಪುತ್ರ ಅಶಿಶ್ ಮಿಶ್ರಾ ಅಲಿಯಾಸ್ ಮೋನು ಪ್ರತಿಭಟನಾನಿರತ ರೈತರನ್ನು ಕೆಣಕಿರುವುದಲ್ಲದೇ, ಅವರ ಮೇಲೆ ಗುಂಡು ಹಾರಿಸಿರುವುದಾಗಿ ಹೇಳಲಾಗಿದೆ.

ಲಖೀಂಪುರ್ ಖೇರ್ ಹಿಂಸಾಚಾರ: ರೈತರನ್ನು ಕೆಣಕಿ, ಗುಂಡು ಹಾರಿಸಿದ ಕೇಂದ್ರ ಸಚಿವರ ಪುತ್ರ- ಎಫ್ ಐಆರ್ ನಲ್ಲಿ ಉಲ್ಲೇಖ
ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಅಶಿಶ್ ಮಿಶ್ರಾ
Published On :

ಲಖೀಂಪುರ್ ಖೇರ್: ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ  ಕಾರಿನಲ್ಲಿ ಕುಳಿತಿದ್ದ ಕೇಂದ್ರ ಸಚಿವರ ಪುತ್ರ ಅಶಿಶ್ ಮಿಶ್ರಾ ಅಲಿಯಾಸ್ ಮೋನು ಪ್ರತಿಭಟನಾನಿರತ ರೈತರನ್ನು ಕೆಣಕಿರುವುದಲ್ಲದೇ, ಅವರ ಮೇಲೆ ಗುಂಡು ಹಾರಿಸಿರುವುದಾಗಿ ಹೇಳಲಾಗಿದೆ.

ಬಹ್ರೈಚ್ ಜಿಲ್ಲೆಯವರಾದ ಜಗಜಿತ್ ಸಿಂಗ್ ಅವರ ದೂರಿನ ಮೇಲೆ ದಾಖಲಾದ ಮೊದಲ ಮಾಹಿತಿ ವರದಿ (ಎಫ್ಐಆರ್) ಪ್ರಕಾರ, ಈ ಎಪಿಸೋಡ್ ಪೂರ್ವ ಯೋಜಿತವಾಗಿದ್ದು,  ಮಂತ್ರಿ ಹಾಗೂ ಆತನ ಪುತ್ರನಿಂದ ಪಿತೂರಿ ನಡೆದಿದೆ ಎಂದು ಹೇಳಲಾಗಿದೆ. 

ಕೇಂದ್ರ ಗೃಹ ಸಚಿವರ ಪ್ರಚೋದನಕಾರಿ  ಹೇಳಿಕೆಗಳು  ರೈತರ ಪ್ರತಿಭಟನೆಗೆ ಕಾರಣವಾಗಿ ಹಿಂಸಾಚಾರ ಭುಗಿಲೆದ್ದಿತು ಮತ್ತು ಎಂಟು ಜನರ ಜೀವವನ್ನು ಬಲಿ ತೆಗೆದುಕೊಂಡಿತು ಎಂದು ಆರೋಪಿಸಲಾಗಿದೆ. 

ಭಾನುವಾರ  ಮಹಾರಾಜ ಅಗ್ರಾಸೇನ್ ಇಂಟರ್ ಕಾಲೇಜಿನ ಕ್ರೀಡಾ ಮೈದಾನದಲ್ಲಿ ಜಮಾಯಿಸಿದ್ದ ರೈತರು, ಬನ್ಬೀಪುರಕ್ಕೆ ಭೇಟಿ ನೀಡುತ್ತಿದ್ದ ಮಿಶ್ರಾ ಮತ್ತು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಶಾಂತಿಯುತವಾಗಿ ಕಪ್ಪು ಬಾವುಟಗಳನ್ನು ತೋರಿಸಲು ಬಯಸಿದ್ದರು ಎಂದು ಎಫ್ ಐಆರ್ ನಲ್ಲಿದೆ.

Related Article

ಬುಧವಾರದೊಳಗೆ ಪ್ರಿಯಾಂಕಾ ಗಾಂಧಿ ಬಿಡುಗಡೆ ಮಾಡದಿದ್ದರೆ ಲಖೀಂಪುರ್ ಖೇರಿಗೆ ಪಂಜಾಬ್ ಕಾಂಗ್ರೆಸ್ ಬರಲಿದೆ- ಸಿಧು

ಲಖಿಂಪುರ ಹಿಂಸಾಚಾರ: ಪ್ರಿಯಾಂಕಾ ಬಂಧನ, ಲಖನೌ ವಿಮಾನ ನಿಲ್ದಾಣದಿಂದ ತೆರಳದಂತೆ ಬಘೇಲ್ ಗೆ ನಿರ್ಬಂಧ

ಲಖಿಂಪುರ ಹಿಂಸಾಚಾರದಿಂದ 2022 ರಲ್ಲಿ ಟೆರಾಯ್ ಭಾಗದಲ್ಲಿ ಬಿಜೆಪಿ ಮೇಲೆ ಗಂಭೀರ ಪರಿಣಾಮ!

ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ವಿಡಿಯೋ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ, ಬಂಧನಕ್ಕೆ ಆಗ್ರಹ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.