ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಮತ್ತೆ ಸರ್ಕಾರ ರಚಿಸಲಿದೆ: ಅಮಿತ್ ಶಾ
ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಮತ್ತೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಪಣಜಿ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಮತ್ತೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಕೇಂದ್ರದಲ್ಲಿ ಮತ್ತು ಗೋವಾದಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ, ಇದರಿಂದ ರಾಜ್ಯದ ಅಭಿವೃದ್ಧಿಯಾಗಲಿದೆ ಎಂದು ಹೇಳಿದ್ದಾರೆ.
ದಕ್ಷಿಣ ಗೋವಾದ ಧರ್ಬಂದೋರಾ ಗ್ರಾಮದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ (NFSU) ಅಡಿಗಲ್ಲು ಹಾಕಿದ ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ನವೆಂಬರ್ 15 ರಿಂದ ಚಾರ್ಟರ್ಡ್ ವಿಮಾನಗಳು ಪ್ರವಾಸೋದ್ಯಮ-ಅವಲಂಬಿತ ರಾಜ್ಯಕ್ಕೆ ಬರಲಾರಂಭಿಸುತ್ತವೆ ಎಂದು ಹೇಳಿದರು.
ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂದು ಅಮಿತ್ ಶಾ ತಿಳಿಸಿದರು. ಚುನಾವಣೆಗೆ ಇನ್ನೂ ಸಮಯವಿದೆ, ಆದರೆ ನಾನು ಜನತೆ ಬಳಿ ಈಗಲೇ ಮನವಿ ಮಾಡುತ್ತಿದ್ದೇನೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ತರುವಂತೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


