ಕೇರಳ: ಪ್ರವಾಹದ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ; ಕಲ್ಯಾಣ ಮಂಟಪ ತಲುಪಿದ್ದೇ ರೋಚಕ!
ಕೇರಳದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಪ್ರವಾಹ ಪರಿಸ್ಥಿತಿ ಕೂಡ ಇದ್ದು, ಇದರ ನಡುವೆ ಜೋಡಿಯೊಂದು ಮದುವೆ ಮುಂದೂಡದೆ ವಿಭಿನ್ನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆಲಪ್ಪುಳ: ಕೇರಳದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಪ್ರವಾಹ ಪರಿಸ್ಥಿತಿ ಕೂಡ ಇದ್ದು, ಇದರ ನಡುವೆ ಜೋಡಿಯೊಂದು ಮದುವೆ ಮುಂದೂಡದೆ ವಿಭಿನ್ನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ತಲವಾಡಿಯ ದೇವಸ್ಥಾನಕ್ಕೆ ಹೊಂದಿಕೊಂಡ ಕಲ್ಯಾಣಮಂಟಪದಲ್ಲಿ ಆಕಾಶ್ ಮತ್ತು ಐಶ್ವರ್ಯ ಮದುವೆಯಾಗಲು ನಿರ್ಧರಿಸಿದ್ದರು. ಆದ್ರೆ ಮಳೆಯಿಂದಾಗಿ ಕಲ್ಯಾಣಮಂಟಪ ಜಲಾವೃತವಾಗಿತ್ತು. ಹೀಗಾಗಿ ಅವರ ಪೋಷಕರು ವಧು-ವರನನ್ನು ಮದುವೆ ಮಂಟಪಕ್ಕೆ ಪ್ರವಾಹದ ನೀರಿನಲ್ಲಿ ದೊಡ್ಡದಾದ ಅಡುಗೆ ಪಾತ್ರೆಯಲ್ಲಿ ಕೂರಿಸಿ ಕರೆತಂದಿದ್ದಾರೆ.
ದೊಡ್ಡ ಪಾತ್ರೆಯ ಮೂಲಕ ಕಲ್ಯಾಣ ಮಂಟಪಕ್ಕೆ ಬಂದ ಈ ಜೋಡಿ ಇಂದು ಕೆಲವೇ ಬಂಧು-ಮಿತ್ರರ ಸಮ್ಮುಖದಲ್ಲಿ ಮದುವೆಯಾಗಿದೆ. ಆಲಪ್ಪುಳ ಜಿಲ್ಲೆಯ ನಿವಾಸಿಗಳಾದ ಆಕಾಶ್ ಮತ್ತು ಐಶ್ವರ್ಯ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.ಈ ಇಬ್ಬರು ಚೆಂಗನೂರುವಿನಲ್ಲಿ ಆರೋಗ್ಯ ಸೇವೆ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


