ದೇಶ

ಜನರಿಗೆ ತೊಂದರೆ ನೀಡುವಲ್ಲಿ ಮೋದಿ ಸರ್ಕಾರ ದಾಖಲೆ ಸೃಷ್ಟಿಸಿದೆ: ಪ್ರಿಯಾಂಕಾ ಗಾಂಧಿ ವಾದ್ರಾ 

ಜನರಿಗೆ ತೊಂದರೆ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದಾಖಲೆ ನಿರ್ಮಿಸಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದಾರೆ.

ಜನರಿಗೆ ತೊಂದರೆ ನೀಡುವಲ್ಲಿ ಮೋದಿ ಸರ್ಕಾರ ದಾಖಲೆ ಸೃಷ್ಟಿಸಿದೆ: ಪ್ರಿಯಾಂಕಾ ಗಾಂಧಿ ವಾದ್ರಾ 
ಪ್ರಿಯಾಂಕಾ ಗಾಂಧಿ ವಾದ್ರಾ
Published On :

ನವದೆಹಲಿ: ಜನರಿಗೆ ತೊಂದರೆ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದಾಖಲೆ ನಿರ್ಮಿಸಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಭಾನುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಮೋದಿ ಸರ್ಕಾರ ಜನರಿಗೆ "ತೊಂದರೆ" ನೀಡುವಲ್ಲಿ ದಾಖಲೆಗಳನ್ನು ಸೃಷ್ಟಿಸಿದೆ ಎಂದು ಆರೋಪಿಸಿದ್ದಾರೆ.

ಟ್ವಿಟರ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿದ್ದು, ಈ ವರ್ಷ ಪೆಟ್ರೋಲ್ ಬೆಲೆ ದಾಖಲೆಯ 23.53 ರೂ.ಗಳಷ್ಟು ಹೆಚ್ಚಾಗಿದೆ. 'ಮೋದಿ ಜಿ ಸರ್ಕಾರವು ಸಾರ್ವಜನಿಕರಿಗೆ ತೊಂದರೆ ನೀಡುವಲ್ಲಿ ದೊಡ್ಡ ದಾಖಲೆಗಳನ್ನು ಮಾಡಿದೆ. ಅತಿ ಹೆಚ್ಚು ನಿರುದ್ಯೋಗ, ಸರ್ಕಾರಿ ಆಸ್ತಿ ಮಾರಾಟದಲ್ಲಿ ದಾಖಲೆ ನಿರ್ಮಿಸಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಇದೇ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿ "ಅಚ್ಛೇ ದಿನ್" (ಒಳ್ಳೆಯ ದಿನಗಳು) ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಸತತ ನಾಲ್ಕನೇ ದಿನವಾದ ಶನಿವಾರ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಮೇಲಿನ ದರವನ್ನು ಪ್ರತಿ ಲೀಟರ್‌ಗೆ 36 ರೂ. ಮತ್ತು ಡೀಸೆಲ್ ಮೇಲೆ 26.58 ರೂ.ಗೆ ಏರಿಕೆ ಮಾಡಲಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.