ಮುಂದಿನ 15 ವರ್ಷಗಳಲ್ಲಿ ಬ್ರಿಕ್ಸ್ ಹೆಚ್ಚು ಪ್ರಭಾವಿಯಾಗುವಂತೆ ನೋಡಿಕೊಳ್ಳಬೇಕು: ಪ್ರಧಾನಿ ಮೋದಿ
ಬ್ರಿಕ್ಸ್ ಭಯೋತ್ಪಾದನೆ ನಿಗ್ರಹ ಕ್ರಿಯಾ ಯೋಜನೆಯನ್ನು ಅಳವಡಿಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಐದು ರಾಷ್ಟ್ರಗಳ ಶೃಂಗಸಭೆಯಲ್ಲಿ ಹೇಳಿದ್ದಾರೆ.

ನವದೆಹಲಿ: ಬ್ರಿಕ್ಸ್ ಭಯೋತ್ಪಾದನೆ ನಿಗ್ರಹ ಕ್ರಿಯಾ ಯೋಜನೆಯನ್ನು ಅಳವಡಿಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಐದು ರಾಷ್ಟ್ರಗಳ ಶೃಂಗಸಭೆಯಲ್ಲಿ ಹೇಳಿದ್ದಾರೆ.
ಬ್ರಿಕ್ಸ್ ವಾರ್ಷಿಕ ಶೃಂಗಸಭೆಯ ಅಧ್ಯಕ್ಷತೆ ವಹಿಸಿ ವರ್ಚುವಲ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಐದು ರಾಷ್ಟ್ರಗಳು ಬ್ರಿಕ್ಸ್ ಭಯೋತ್ಪಾದನಾ ನಿಗ್ರಹ ಯೋಜನೆಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಿವೆ. ಅಫ್ಘಾನಿಸ್ತಾನವನ್ನು ತಾಲಿಬಾನ್‌ಗಳು ಸ್ವಾಧೀನಪಡಿಸಿಕೊಂಡಿದ್ದರಿಂದ ಈ ಪ್ರದೇಶವು ಹಲವಾರು ಭದ್ರತಾ ಸವಾಲುಗಳನ್ನು ಎದುರಿಸುತ್ತಿದೆ ಎಂದರು.
ಬ್ರಿಕ್ಸ್ ಸಮಾವೇಶದಲ್ಲಿ ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ ಹಾಗೂ ಬ್ರೆಜಿಲ್ ಪಾಲ್ಗೊಂಡಿದ್ದವು.
ಕಳೆದ 13 ವರ್ಷಗಳಲ್ಲಿ ಬ್ರಿಕ್ಸ್ ಮಾಡಿರುವ ಹಲವು ಸಾಧನೆಗಳನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಪ್ರಗತಿಶೀಲ ಆರ್ಥಿಕತೆಯ ಪ್ರಭಾವಿ ಧ್ವನಿಗಳಾಗಿರುವ ನಾವು ಅಭಿವೃದ್ಧಿಶೀಲ ದೇಶಗಳಿಗಾಗಿ ವೇದಿಕೆಯೊಂದನ್ನು ರೂಪಿಸಿದ್ದೇವೆ ಎಂದರು.
ಇದನ್ನು ಓದಿ: ಮೋದಿ-ಪುಟಿನ್ ಮಾತುಕತೆ ಬೆನ್ನಲ್ಲೇ, ಆಫ್ಘಾನಿಸ್ತಾನ ಬೆಳವಣಿಗೆ ಕುರಿತು ಭಾರತ-ರಷ್ಯಾ ಭದ್ರತಾ ಸಲಹೆಗಾರರ ಮಾತುಕತೆ
ಮುಂದಿನ 15 ವರ್ಷಗಳಲ್ಲಿ ಬ್ರಿಕ್ಸ್ ಇನ್ನಷ್ಟು ಪ್ರಭಾವಿಯಾಗುವಂತೆ ಮಾಡಲು ನಾವೆಲ್ಲರೂ ಗಮನಹರಿಸಬೇಕು. ಬ್ರಿಕ್ಸ್ನ ಅಧ್ಯಕ್ಷತೆಯ ಗೌರವಕ್ಕೆ ಪಾತ್ರವಾಗಿರುವ ಭಾರತವು ಸತತ ಪ್ರಗತಿ, ಸಹಯೋಗ ಮತ್ತು ಸಹಮತದ ಆಶಯವನ್ನು ಮುಂದಿಟ್ಟಿದೆ ಎಂದು ಮೋದಿ ಹೇಳಿದರು.
ನಿರಂತರತೆ, ಬಲವರ್ಧನೆ ಮತ್ತು ಒಮ್ಮತಕ್ಕಾಗಿ ಬ್ರಿಕ್ಸ್ ಸಹಕಾರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಿಕ್ಸ್ ಶೃಂಗಸಭೆ ಅಧ್ಯಕ್ಷತೆಯ ಗೌರವ 2ನೇ ಬಾರಿಗೆ ಒಲಿದಿದೆ. 2016ರಲ್ಲಿ ಗೋವಾದಲ್ಲಿ ನಡೆದಿದ್ದ ಸಮಾವೇಶದಲ್ಲಿ ಮೋದಿ ಅಧ್ಯಕ್ಷತೆ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


