ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ 6.02 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆ ಲಭ್ಯ: ಕೇಂದ್ರ ಸರ್ಕಾರ

6.02 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆ ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ 6.02 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆ ಲಭ್ಯ: ಕೇಂದ್ರ ಸರ್ಕಾರ
ಸಂಗ್ರಹ ಚಿತ್ರ
Published On :

ನವದೆಹಲಿ: 6.02 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆ ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 78.02  ಕೋಟಿ ಡೋಸ್ ಗೂ ಹೆಚ್ಚು ಲಸಿಕೆ ಒದಗಿಸಲಾಗಿದೆ ಮತ್ತು ಇನ್ನೂ 33.08 ಲಕ್ಷಕ್ಕೂ ಹೆಚ್ಚು ಡೋಸ್‌ ಲಸಿಕೆ ಪೂರೈಸಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

6,02,70,245 ಕೋಟಿ ಡೋಸ್ ಗೂ ಹೆಚ್ಚು ಬ್ಯಾಲೆನ್ಸ್ ಮತ್ತು ಬಳಕೆಯಾಗದ ಕೋವಿಡ್ -19 ಲಸಿಕೆ ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಹೇಳಿದೆ.

ಕೇಂದ್ರ ಸರ್ಕಾರವು ಕೋವಿಡ್ ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಕೋವಿಡ್ ಲಸಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿದೆ. 

ಕೋವಿಡ್ -19 ಲಸಿಕೆಯ ಸಾರ್ವತ್ರಿಕರಣದ ಹೊಸ ಹಂತವು ಜೂನ್ 21 ರಿಂದ ಆರಂಭವಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.