ಪ್ಯಾನ್ ಕಾರ್ಡ್ ಗೆ ಆಧಾರ್ ಜೋಡಣೆ; ಮಾ.31ರ ವರೆಗೆ ಅಂತಿಮ ಗಡುವು ವಿಸ್ತರಣೆ
ಪ್ಯಾನ್ ಮತ್ತು ಆಧಾರ್ ಸಂಖ್ಯೆ ಜೋಡಣೆಯ ಸಮಯವನ್ನು2022ರ ಮಾರ್ಚ್ 31ರವರೆಗೆ ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.

ನವದೆಹಲಿ: ಪ್ಯಾನ್ ಮತ್ತು ಆಧಾರ್ ಸಂಖ್ಯೆ ಜೋಡಣೆಯ ಸಮಯವನ್ನು2022ರ ಮಾರ್ಚ್ 31ರವರೆಗೆ ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.
ಫ್ಯಾನ್ ಆಧಾರ್ ಸಂಖ್ಯೆಯ ಜೋಡಣೆ ಅವಧಿ ಮಾಡಲು ಸೆಪ್ಟೆಂಬರ್ 31ರವರೆಗೆ ಕೇಂದ್ರ ಸರ್ಕಾರ ಸಮಯ ನೀಡಿತ್ತು. ಇದೀಗ ಅವಧಿಯನ್ನು ಮತ್ತೆ 6 ತಿಂಗಳು ವಿಸ್ತರಣೆ ಮಾಡಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ವಿಸ್ತರಣೆ ಮಾಡಿರುವುದರಿಂದ ಇದುವರೆಗೂ ಪ್ಯಾನ್ ಮತ್ತು ಆಧಾರ್ ಸಂಖ್ಯೆ ಜೋಡಣೆ ಮಾಡಿದ ಮಂದಿ ಸಂಖ್ಯೆ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆಧಾರ್ ಸಂಖ್ಯೆ ಮತ್ತು ಪ್ಯಾನ್ ಸಂಖ್ಯೆ ಜೋಡಣೆಯಾಗಿದೆ ಹಿನ್ನೆಲೆಯಲ್ಲಿ ಅನೇಕ ಸಮಸ್ಯೆಗಳು ಮತ್ತು ದೂರುಗಳು ಹಾಗೂ ಆಕ್ಷೇಪಣೆಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
ದೇಶದಲ್ಲಿ ಮೊದಲ ಮತ್ತು ಎರಡನೇ ಅಲೆಯ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ನಿಗದಿತ ಕೇಂದ್ರಗಳಿಗೆ ತೆರಳಿ ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆ ನಿಗದಿತ ಗಡುವಿನೊಳಗೆ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ೨೦೨೨ ರ ಮಾರ್ಚ್ ೩೧ರವರೆಗೆ ಈ ಅವಧಿಯನ್ನು ವಿಸ್ತರಿಸಿ ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಹಣಕಾಸು ಸಚಿವಾಲಯದ ವ್ಯಾಪ್ತಿಗೆ ಬರುವ ಕೇಂದ್ರ ನೇರ ತೆರಿಗೆ ಮಂಡಳಿ ಆಧಾರ್ ಸಂಖ್ಯೆ ಜೋಡಣೆ ಮಾಡುವ ಸಮಯವನ್ನು ಮುಂದಿನ ಆರು ತಿಂಗಳ ಕಾಲ ವಿಸ್ತರಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಟ್ಟಿದೆ. ಆಧಾರ್ ಸಂಖ್ಯೆಗೆ ಪ್ಯಾನ್ ಸಂಖ್ಯೆ ಜೋಡಣೆ ಮಾಡುವುದರಿಂದ ಹಲವು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಮತ್ತು ಇನ್ನಿತರ ಯೋಜನೆಗಳಿಗೆ ಸಹಕಾರಿಯಾಗಲಿದೆ ಹೀಗಾಗಿ ನಿಗದಿತ ಗಡುವಿನಲ್ಲಿ ಜೋಡಣೆ ಮಾಡಿ ಎಂದು ತಿಳಿಸಲಾಗಿದೆ. ಪಾನ್ ಮತ್ತು ಆಧಾರ್ ಸಂಖ್ಯೆ ಜೋಡಣೆಗೆ ಈಗಾಗಲೇ ಹಲವು ಬಾರಿ ನೀಡಿದ್ದ ಗಡುವು ಅವಧಿಯನ್ನು ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


