ದೇಶ

ಮಾಸ್ಕ್ ಧರಿಸುವುದು ಜನರ ಆಯ್ಕೆ; ತೆಲಂಗಾಣ ಸರ್ಕಾರ

ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಕಳೆದ 2 ವರ್ಷದಿಂದ ಜಾರಿಯಲ್ಲಿದ್ದ ಕಡ್ಡಾಯ ಮಾಸ್ಕ್ ಧಾರಣೆ ನಿಯಮವನ್ನ ತೆಗೆದುಹಾಕಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

ಮಾಸ್ಕ್ ಧರಿಸುವುದು ಜನರ ಆಯ್ಕೆ; ತೆಲಂಗಾಣ ಸರ್ಕಾರ
ಸಂಗ್ರಹ ಚಿತ್ರ
Published On :

ಹೈದರಾಬಾದ್: ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಕಳೆದ 2 ವರ್ಷದಿಂದ ಜಾರಿಯಲ್ಲಿದ್ದ ಕಡ್ಡಾಯ ಮಾಸ್ಕ್ ಧಾರಣೆ ನಿಯಮವನ್ನ ತೆಗೆದುಹಾಕಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

ಕೆಲವು ವಾರಗಳಿಂದ ಕೋವಿಡ್-19 ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗುತ್ತಿದ್ದು, ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಸೇರಿದಂತೆ ಎಲ್ಲಾ ಕೋವಿಡ್-19 ಸಂಬಂಧಿತ ನಿರ್ಬಂಧಗಳನ್ನು ತೆಗೆದುಹಾಕಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

ವಯಸ್ಸಾದವರು, ಕೊಮಾರ್ಬಿಡಿಟಿ ಹೊಂದಿರುವವರು ಮತ್ತು ಗರ್ಭಿಣಿಯರನ್ನು ಹೊರತುಪಡಿಸಿ ಉಲಿದವರು ಮಾಸ್ಕ್ ಧರಿಸುವುದು ಅವರ ಆಯ್ಕೆ ಆಗಿರಲಿದೆ. ತೆಲಂಗಾಣದಲ್ಲಿ ಕೋವಿಡ್ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ, ಪ್ರತಿದಿನ 50 ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗುತ್ತಿವೆ ಎಂದು ಸಾರ್ವಜನಿಕ ಆರೋಗ್ಯದ ರಾಜ್ಯ ನಿರ್ದೇಶಕ ಜಿ ಶ್ರೀನಿವಾಸ ರಾವ್ ಹೇಳಿದ್ದಾರೆ.

ಕೊರೊನಾ ವೈರಸ್ ರೋಗಕ್ಕೆ ಸಂಬಂಧಿಸಿದ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳ ಗುರುವಾರ ಘೋಷಿಸಿದ ಒಂದು ದಿನದ ನಂತರ ಕೋವಿಡ್ -19 ಸಂಬಂಧಿತ ನಿರ್ಬಂಧಗಳನ್ನು ತೆಗೆದುಹಾಕಲು ತೆಲಂಗಾಣ ಸರ್ಕಾರದ ನಿರ್ಧರಿಸಿದೆ.

ದೆಹಲಿ ಕೂಡ ಸಾರ್ವಜನಿಕ ಸ್ಥಳಗಳಲ್ಲಿ ಮುಖವಾಡಗಳನ್ನು ಕಡ್ಡಾಯವಾಗಿ ಧರಿಸುವುದನ್ನು ತೆಗೆದುಹಾಕಲು ನಿನ್ನೆ ನಿರ್ಧರಿಸಿದೆ.

ಮಾರ್ಚ್ 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡ್ತಿದ್ದಂತೆ  ಸುಮಾರು ಎರಡು ವರ್ಷಗಳ ನಂತರ ಕೋವಿಡ್ -19 ನಿರ್ಬಂಧಗಳನ್ನು ಹಂತ ಹಂತವಾಗಿ  ಹಿಂತೆದುಕೊಳ್ಳಲಾಗ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.