ಕೇರಳ: ಮಂಕಿಪಾಕ್ಸ್ ರೋಗ ಲಕ್ಷಣದ ವ್ಯಕ್ತಿ ಸಾವು, 20 ಮಂದಿ ಕ್ವಾರಂಟೈನ್
ಮಂಕಿಪಾಕ್ಸ್ ರೋಗ ಲಕ್ಷಣದ ವ್ಯಕ್ತಿಯೊಬ್ಬರು ಸಾವನಪ್ಪಿದ್ದ ನಂತರ ಕೇರಳದ ತ್ರಿಶೂರ್ ನಲ್ಲಿ 20 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ತ್ರಿಶೂರ್: ಮಂಕಿಪಾಕ್ಸ್ ರೋಗ ಲಕ್ಷಣದ ವ್ಯಕ್ತಿಯೊಬ್ಬರು ಸಾವನಪ್ಪಿದ್ದ ನಂತರ ಕೇರಳದ ತ್ರಿಶೂರ್ ನಲ್ಲಿ 20 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಕುಟುಂಬಸ್ಥರು ಮತ್ತು ಸ್ನೇಹಿತರು ಸೇರಿದಂತೆ ಕೇವಲ 10 ಜನರೊಂದಿಗೆ ಮೃತ ವ್ಯಕ್ತಿ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇದೀಗ ಪರಿಸ್ಥಿತಿ ಹತೋಟಿಯಲ್ಲಿದ್ದು, ಆತಂಪಡುವ ಅಗತ್ಯವಿಲ್ಲ. ಇಲ್ಲಿಯವರೆಗೂ 20 ಜನರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸದಸ್ಯ ರೆಂಜಿನಿ ಹೇಳಿದ್ದಾರೆ.
ರೋಗ ಲಕ್ಷಣವಿರುವ ವ್ಯಕ್ತಿ ಸಾವನ್ನಪ್ಪಿದ್ದ ನಂತರ ತ್ರಿಶೂರ್ ನ ಪುಣ್ಣಯೂರು ಗ್ರಾಮ ಪಂಚಾಯಿತಿ ಸದಸ್ಯರು ಸಭೆ ನಡೆಸಿ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ. ಮಂಕಿಪಾಕ್ಸ್ ರೋಗ ತಡೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


