ಕೇರಳದಲ್ಲಿ ಭಾರೀ ಮಳೆ, ಏಳು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಣೆ
ಕೇರಳದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ ಏಳು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಿಸಿದೆ.

ತಿರುವನಂತಪುರಂ: ಕೇರಳದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ ಏಳು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಿಸಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಾಪ್ಪುಝಾ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಣೆಯಾಗಿದೆ.
ಮಳೆಯಿಂದಾದ ಹಾನಿಯನ್ನು ನಿರ್ಣಯಿಸಿ, ಪರಿಹಾರ ಕಾರ್ಯ ಕೈಗೊಳ್ಳಲು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಜಿಲ್ಲಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮಳೆ ಹಿನ್ನೆಲೆಯಲ್ಲಿ ಜನರು ನದಿಗಳತ್ತ ತೆರಳದಂತೆ, ಕೆರೆ, ಹೊಳೆ ಹತ್ತಿರ ಸ್ನಾನಕ್ಕೆ, ಬಟ್ಟೆ ತೊಳೆಯಲು ಹೋಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ರೆಡ್ ಆಲರ್ಟ್ ಅಲ್ಲದೇ, ತ್ರಿಶೂರ್, ಮಲ್ಲಪುರಂ ಜಿಲ್ಲೆಯಲ್ಲಿ ಆರೆಂಜ್ ಆಲರ್ಟ್, ಉಳಿದ ಕಡೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


