ತಿಹಾರ್ ಜೈಲಿನಲ್ಲಿ 10 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಯಾಸಿನ್ ಮಲಿಕ್
ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದ 10 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಸೋಮವಾರ ಉಪವಾಸ ಅಂತ್ಯಗೊಳಿಸಿದ್ದಾರೆ.

ನವದೆಹಲಿ: ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದ 10 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಸೋಮವಾರ ಉಪವಾಸ ಅಂತ್ಯಗೊಳಿಸಿದ್ದಾರೆ.
ನಿಮ್ಮ ಬೇಡಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಲಿಕ್ ಗೆ ತಿಳಿಸಿದ ನಂತರ ಇಂದು ಸಂಜೆ ಉಪವಾಸವನ್ನು ಕೈಬಿಟ್ಟರು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ತಾನು ಆರೋಪಿಯಾಗಿರುವ ರುಬಯ್ಯ ಸಯೀದ್ ಅಪಹರಣ ಪ್ರಕರಣದ ವಿಚಾರಣೆ ನಡೆಸುತ್ತಿರುವ ಜಮ್ಮು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕು ಎಂಬ ತನ್ನ ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ ಮತ್ತು ತನ್ನ ವಿರುದ್ಧದ ಪ್ರಕರಣಗಳ ವಿಚಾರಣೆ ನ್ಯಾಯಯುತವಾಗಿ ನಡೆದಿಲ್ಲ ಆರೋಪಿಸಿ ಜುಲೈ 22ರಂದು ಮಲಿಕ್ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
2017 ರ ಭಯೋತ್ಪಾದಕ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಿಕ್ ಅವರನ್ನು ದೋಷಿ ಎಂದು ಘೋಷಿಸಲಾಗಿದ್ದು, ಮೇ 25 ರಂದು ಎನ್ಐಎ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


