ಹೆಲಿಕಾಪ್ಟರ್ ಅಪಘಾತ: ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್, ಐವರು ಉನ್ನತ ಅಧಿಕಾರಿಗಳು ದುರ್ಮರಣ
ಬಲೂಚಿಸ್ತಾನದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್ ಹಾಗೂ ಐವರು ಹಿರಿಯ ಮಿಲಿಟರಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ.

ಇಸ್ಲಾಮಾಬಾದ್: ಬಲೂಚಿಸ್ತಾನದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್ ಹಾಗೂ ಐವರು ಹಿರಿಯ ಮಿಲಿಟರಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ.
ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆ ಮೇಲ್ವಿಚಾರಣೆ ಮಾಡುತ್ತಿದ್ದ 12ನೇ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಸರ್ಫಾಜ್ ಆಲಿ ಸೇರಿದಂತೆ ಐವರಿದ್ದ ಹೆಲಿಪಾಕ್ಟರ್ ದುರಾದೃಷ್ಟವಶಾತ್ ಲಾಸ್ ಬೆಲಾದಲ್ಲಿ ಅಪಘಾತಕ್ಕೀಡಾಗಿದೆ.
ಎಲ್ಲ ಆರು ಅಧಿಕಾರಿಗಳು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪಾಕ್ ಸಶಸ್ತ್ರ ಪಡೆ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ ಡೈರೆಕ್ಟರ್ ಜನರಲ್ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಹೇಳಿದ್ದಾರೆ.ಪ್ರತಿಕೂಲ ಹವಾಮಾನದಿಂದ ಹೆಲಿಕಾಪ್ಟರ್ ಪತನವಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ತಿಳಿಸಿದ್ದಾರೆ.
ಘಟನೆ ಕುರಿತು ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಅವರೊಂದಿಗೆ ಸೇನಾ ಮುಖ್ಯಸ್ಥ ಜನರಲ್ ಜಾವೇದ್ ಬಜ್ವಾ ತಿಳಿಸಿದ್ದು, ಶರೀಫ್ ಘಟನೆ ಕುರಿತು ದು:ಖ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


