ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಗೆ ಬಿಎಸ್ ಪಿ ಬೆಂಬಲ
ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು ಬಿಎಸ್ ಪಿ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.

ಲಖನೌ: ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು ಬಿಎಸ್ ಪಿ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.
ಇದನ್ನೂ ಓದಿ: ಉಪ ರಾಷ್ಟ್ರಪತಿ ಚುನಾವಣೆ: ಜಗದೀಪ್ ಧಂಕರ್ ನಾಮಪತ್ರ ಸಲ್ಲಿಕೆ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಉಪಸ್ಥಿತಿ!
ಸಾರ್ವಜನಿಕರ ಹಿತಾಸಕ್ತಿ ಮತ್ತು ತನ್ನ ಸ್ವಂತ ಚಳವಳಿ ನಿಟ್ಟನಲ್ಲಿ ಆಗಸ್ಟ್ 6 ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು ಬೆಂಬಲಿಸಲು ಬಿಎಸ್ ಪಿ ನಿರ್ಧರಿಸಿದೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
ವೆಂಕಯ್ಯನಾಯ್ಡು ಅವರ ಅಧಿಕಾರವಧಿ ಆಗಸ್ಟ್ 10 ರಂದು ಕೊನೆಯಾಗುವ ಹಿನ್ನೆಲೆಯಲ್ಲಿ ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜಗದೀಪ್ ಧಂಕರ್ ಎನ್ ಡಿಎ ಅಭ್ಯರ್ಥಿಯಾದರೆ, ಮಾರ್ಗರೇಟ್ ಆಳ್ವಾ ವಿರೋಧಪಕ್ಷಗಳ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


