ಸಿಜೆಐ ರಮಣ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆ: ನ್ಯಾಯಮೂರ್ತಿ ಲಲಿತ್ ಹೆಸರು ಶಿಫಾರಸು!
ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ತಮ್ಮ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದರು.

ನವದೆಹಲಿ: ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ತಮ್ಮ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದರು.
ಸಿಜೆಐ ರಮಣ ಅವರು ತಮ್ಮ ಶಿಫಾರಸು ಪತ್ರದ ಪ್ರತಿಯನ್ನು ಖುದ್ದಾಗಿ ನ್ಯಾಯಮೂರ್ತಿ ಲಲಿತ್ ಅವರಿಗೆ ನೀಡಿದ್ದಾರೆ. ರಮಣ ಅವರ ನಂತರದ ಹಿರಿತನದಲ್ಲಿ ನ್ಯಾಯಮೂರ್ತಿ ಲಲಿತ್ ಅವರಿದ್ದಾರೆ.
2021ರ ಏಪ್ರಿಲ್ 24ರಂದು ಎಸ್ ಎ ಬೋಬ್ಡೆ ಅವರಿಂದ ಭಾರತೀಯ ನ್ಯಾಯಾಂಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಭಾರತದ 48 ನೇ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ರಮಣ ಅವರು 16 ತಿಂಗಳ ಅವಧಿಯ ನಂತರ ಆಗಸ್ಟ್ 26ರಂದು ನಿವೃತ್ತರಾಗಲಿದ್ದಾರೆ.
ನಂತರ ನ್ಯಾಯಮೂರ್ತಿ ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅವರ ಅಧಿಕಾರಾವಧಿಯು ಚಿಕ್ಕದಾಗಿರಲಿದ್ದು 2022ರ ನವೆಂಬರ್ 8ರವರೆಗೆ ಈ ಹುದ್ದೆಯಲ್ಲಿ ಮುಂದುವರಿಯುತ್ತಾರೆ.
ಪ್ರಸ್ತುತ ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ-ಅತ್ಯಂತ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಲಲಿತ್ ಅವರು 1983ರ ಜೂನ್ ನಿಂದ ವಕೀಲಿಗಿರಿ ಆರಂಭಿಸಿದ್ದರು. ಡಿಸೆಂಬರ್ 1985ರವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದ್ದರು. ನಂತರ 1986ರ ಜನವರಿಯಿಂದ ದೆಹಲಿಯಲ್ಲಿ ಅಭ್ಯಾಸ ಆರಂಭಿಸಿದ್ದರು.
ಏಪ್ರಿಲ್ 2004ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಹಿರಿಯ ವಕೀಲರಾಗಿ ನಾಮನಿರ್ದೇಶನಗೊಂಡಿದ್ದ ಅವರು ಹಲವಾರು ಪ್ರಕರಣಗಳಲ್ಲಿ ಅಮಿಕಸ್ ಕ್ಯೂರಿಯಾಗಿ ಕಾಣಿಸಿಕೊಂಡರು. ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಎಲ್ಲಾ 2ಜಿ ಪ್ರಕರಣಗಳನ್ನು ವಿಚಾರಣೆ ಮಾಡಲು ಸಿಬಿಐಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಅವರನ್ನು ನೇಮಿಸಲಾಗಿತು. ನ್ಯಾಯಮೂರ್ತಿ ಲಲಿತ್ ಅವರು ಎರಡು ಅವಧಿಗೆ ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ಕಾನೂನು ಸೇವೆಗಳ ಸಮಿತಿಯ ಸದಸ್ಯರಾಗಿದ್ದರು.
ಬಾರ್‌ನಿಂದ ನೇರವಾಗಿ ಬಡ್ತಿ ಪಡೆದ ಅವರು 2014ರ ಆಗಸ್ಟ್ 13ರಂದು ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


