ದೆಹಲಿ: ಆರೋಗ್ಯ ಸೇವೆಗೆ ಒತ್ತಾಯಿಸಿ 82 ವರ್ಷದ ವೃದ್ಧೆಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ಕಾಸರಗೋಡು ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರಿಗೆ ವಿಶೇಷ ಆರೋಗ್ಯ ಸೇವೆ ನೀಡುವಂತೆ ಒತ್ತಾಯಿಸಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ 82 ವರ್ಷದ ದಯಾಬಾಯಿ ಅವರು ಕೇರಳದ ಸೆಕ್ರೆಟರಿಯೇಟ್ ಎದುರು ನಾಳೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಕಾಸರಗೋಡು: ಕಾಸರಗೋಡು ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರಿಗೆ ವಿಶೇಷ ಆರೋಗ್ಯ ಸೇವೆ ನೀಡುವಂತೆ ಒತ್ತಾಯಿಸಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ 82 ವರ್ಷದ ದಯಾಬಾಯಿ ಅವರು ಕೇರಳದ ಸೆಕ್ರೆಟರಿಯೇಟ್ ಎದುರು ನಾಳೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ನಮ್ಮ ಬೇಡಿಕೆಗಳು ವಿಶೇಷವೇನೂ ಅಲ್ಲ. ಆರೋಗ್ಯ ರಕ್ಷಣೆ ಜೀವನದ ಹಕ್ಕು. ಇದು ಮೂಲಭೂತ ಹಕ್ಕು ಎಂದು ಅವರು ಹೇಳಿದ್ದಾರೆ.
ಏಮ್ಸ್ ಸ್ಥಾಪನೆಗಾಗಿ ಉದ್ದೇಶಿತ ಸ್ಥಳಗಳ ಪಟ್ಟಿಯಲ್ಲಿ ಕಾಸರಗೋಡು ಸೇರಿಸಬೇಕು, ಎಂಡೋಸಲ್ಫಾನ್ ರೋಗಿಗಳಿಗೆ ವಿಶೇಷ ವೈದ್ಯಕೀಯ ಸೇವೆ ಲಭ್ಯವಾಗುವಂತೆ ಮಾಡುವುದು ಮತ್ತು ಮೂರು, ಎಂಡೋಸಲ್ಫಾನ್ ರೋಗಿಗಳಿಗೆ ಡೇ ಕೇರ್ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದು ದಯಾಬಾಯಿ ಅವರ ಪ್ರಮುಖ ಮೂರು ಬೇಡಿಕೆಗಳಾಗಿವೆ.
ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಕರ್ನಾಟಕ ಸರ್ಕಾರ ಅವಕಾಶ ನೀಡದ ಕಾರಣ ಜಿಲ್ಲೆಯ ಗಡಿಯಲ್ಲಿ 20 ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗೀ ಕಾಸರಗೋಡಿನಲ್ಲಿ ಏಮ್ಸ್ ಸ್ಥಾಪಿಸಬೇಕು ಎಂದು ಅವರು ಹೇಳಿದ್ದಾರೆ. ತನಗೆ 82 ವರ್ಷ ಆದರೆ 28 ವರ್ಷ ಎಂದು ಭಾವಿಸಿ ಸುದೀರ್ಘ ಉಪವಾಸ ಸತ್ಯಾಗ್ರಹಕ್ಕೆ ಸಿದ್ಧ ಎನ್ನುತ್ತಾರೆ ದಯಾಬಾಯಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


