ದೇಶದಲ್ಲಿ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಿಕೆ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ
ದೇಶದಲ್ಲಿ ಇಲ್ಲಿಯವರೆಗೂ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ದೇಶದಲ್ಲಿ ಇಲ್ಲಿಯವರೆಗೂ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಶುಕ್ರವಾರ ಹೇಳಿದ್ದಾರೆ. 18 ವರ್ಷ ಕ್ಕೂ ಮೇಲ್ಪಟ್ಟವರಿಗೆ ಸಾರ್ವಜನಿಕ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಮುನ್ನೆಚ್ಚರಿಕೆ ಡೋಸ್ ನೀಡುವ 75 ದಿನಗಳ ವಿಶೇಷ ಅಭಿಯಾನವನ್ನು ಸರ್ಕಾರ ಜುಲೈ 15 ರಂದು ಪ್ರಾರಂಭಿಸಿತ್ತು.
ಈ ಕುರಿತು ಟ್ವೀಟ್ ಮಾಡಿರುವ ಮಾಂಡವೀಯಾ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಡಿ, ಅಮೃತ ಮಹೋತ್ಸವ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮ ವೇಗವಾಗಿ ನಡೆಯುತ್ತಿದ್ದು, ಎಲ್ಲಾ ವಯಸ್ಕರಿಗೆ ಉಚಿತವಾಗಿ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ 75 ದಿನಗಳ ವಿಶೇಷ ಕೋವಿಡ್ ಲಸಿಕಾ ಅಭಿಯಾನವನ್ನು ಆರಂಭಿಸಿದ್ದು, ಉಚಿತವಾಗಿ ಮುನ್ನೆಚ್ಚರಿಕೆ ಡೋಸ್ ನೀಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


