ಕೋವಿಡ್-19: ದೇಶದಲ್ಲಿ ಕೊರೋನಾಗೆ ಇಂದು 70 ಮಂದಿ ಬಲಿ, 20,551 ಮಂದಿಗೆ ಪಾಸಿಟಿವ್
ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 20,551 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,41,07,588ಕ್ಕೆ ಏರಿಕೆಯಾಗಿದೆ.

ನವದೆಹಲಿ: ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 20,551 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,41,07,588ಕ್ಕೆ ಏರಿಕೆಯಾಗಿದೆ.
ಇನ್ನೂ ದೇಶದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 70 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 5,26,600ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.31ರಷ್ಟು ಸಕ್ರಿಯ ಪ್ರಕರಣಗಳು ಇದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.50ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ದೈನಂದಿನ ಪಾಸಿಟಿವಿಟಿ ದರ ಶೇ. 5.14ಕ್ಕೆ ಏರಿಕೆಯಾಗಿದ್ದರೆ, ಮರಣ ಪ್ರಮಾಣ ಶೇ. 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 4.64ರಷ್ಟಿದೆ. ಸೋಂಕಿನಿಂದ ಈವರೆಗೆ 4,34,24,624 ಜನರು ಚೇತರಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


