ರಾಜ್ಯಗಳ ವಿರುದ್ಧ ಕೇಂದ್ರದ 'ತಾರತಮ್ಯ' ಪ್ರತಿಭಟಿಸಿ ನೀತಿ ಆಯೋಗ ಸಭೆಗೆ ಕೆಸಿಆರ್ ಬಹಿಷ್ಕಾರ
ರಾಜ್ಯಗಳ ವಿರುದ್ಧ ಕೇಂದ್ರದ ತಾರತಮ್ಯ' ಧೋರಣೆ ವಿರೋಧಿಸಿ ತೀವ್ರ ಪ್ರತಿಭಟನೆಯ ಸಂಕೇತವಾಗಿ ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ 7 ನೇ ಆಡಳಿತ ಮಂಡಳಿ ಸಭೆಯನ್ನು ಬಹಿಷ್ಕರಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ.

ಹೈದರಾಬಾದ್: ರಾಜ್ಯಗಳ ವಿರುದ್ಧ ಕೇಂದ್ರದ ತಾರತಮ್ಯ' ಧೋರಣೆ ವಿರೋಧಿಸಿ ತೀವ್ರ ಪ್ರತಿಭಟನೆಯ ಸಂಕೇತವಾಗಿ ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ 7 ನೇ ಆಡಳಿತ ಮಂಡಳಿ ಸಭೆಯನ್ನು ಬಹಿಷ್ಕರಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ.
ರಾಜ್ಯಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕೆಸಿಆರ್ ಮೋದಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. ಬಲಿಷ್ಠ ಮತ್ತು ಆರ್ಥಿಕವಾಗಿ ಚೈತನ್ಯವಿರುವ ರಾಜ್ಯಗಳು ಮಾತ್ರ ರಾಷ್ಟ್ರವನ್ನು ಬಲಿಷ್ಠಗೊಳಿಸಬಲ್ಲವು ಎಂದು ಅವರು ತಿಳಿಸಿದ್ದಾರೆ.
ಈ ಸತ್ಯಗಳ ದೃಷ್ಟಿಯಿಂದ, ಆಗಸ್ಟ್ 7, 2022 ರಂದು ನಡೆಯಲಿರುವ ನೀತಿ ಆಯೋಗದ 7 ನೇ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸಲು ನನಗೆ ಪ್ರಯೋಜನವಾಗುತ್ತಿಲ್ಲ ಮತ್ತು ಕೇಂದ್ರದ ವಿರುದ್ಧದ ತೀವ್ರ ಪ್ರತಿಭಟನೆಯ ಸಂಕೇತವಾಗಿ ನಾನು ಅದರಿಂದ ದೂರವಿದ್ದೇನೆ ಎಂದಿದ್ದಾರೆ.
ರಾಷ್ಟ್ರವನ್ನು ಬಲಿಷ್ಠ ಮತ್ತು ಅಭಿವೃದ್ಧಿಗೊಳಿಸುವ ನಮ್ಮ ಸಾಮೂಹಿಕ ಪ್ರಯತ್ನದಲ್ಲಿ ರಾಜ್ಯಗಳ ವಿರುದ್ಧ ತಾರತಮ್ಯ ಮತ್ತು ಸಮಾನ ಪಾಲುದಾರರಾಗಿ ಪರಿಗಣಿಸದ ಕೇಂದ್ರ ಸರ್ಕಾರದ ಪ್ರವೃತ್ತಿ ನೀತಿ ಆಯೋಗದ ಸಭೆ ಬಹಿಷ್ಕಾರಕ್ಕೆ ಕಾರಣ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


