ರಾಜಸ್ಥಾನದ ಖಾಟು ಶ್ಯಾಮ್ ದೇವಸ್ಥಾನದಲ್ಲಿ ಮುಂಜಾನೆ ಕಾಲ್ತುಳಿತ; ಮೂವರು ಸಾವು, ಇಬ್ಬರಿಗೆ ಗಾಯ
ರಾಜಸ್ಥಾನದ ಸಿಕಾರ್ ಪಟ್ಟಣದ ದೇವಾಲಯವೊಂದರಲ್ಲಿ ಇಂದು ಮುಂಜಾನೆ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದ ವೇಳೆ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಜೈಪುರ: ರಾಜಸ್ಥಾನದ ಸಿಕಾರ್ ಪಟ್ಟಣದ ದೇವಾಲಯವೊಂದರಲ್ಲಿ ಇಂದು ಮುಂಜಾನೆ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದ ವೇಳೆ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಖಾಟು ಶ್ಯಾಮ್‌ಜಿ ದೇವಾಲಯದಲ್ಲಿ ಮಾಸಿಕ ಜಾತ್ರೆಯ ವೇಳೆ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಜೈಪುರ ಆಸ್ಪತ್ರೆಗೆ ದಾಖಲಿಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ. ಇಂದು ಭಗವಾನ್ ಕೃಷ್ಣನ ಅವತಾರವೆಂದು ನಂಬಲಾದ ಖಾಟು ಶ್ಯಾಮ್ ಜಿಯ ದರ್ಶನಕ್ಕೆ ಬಹಳ ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ, ಮುಂಜಾನೆಯಿಂದಲೇ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.
ಪೊಲೀಸರ ಪ್ರಕಾರ, ದೇವಾಲಯದ ಹೊರಗೆ ದೊಡ್ಡ ಜನಸಮೂಹ ಜಮಾಯಿಸಿ, ಗೇಟ್ ತೆರೆಯುವುದನ್ನೇ ಕಾಯುತ್ತಿದ್ದರು. ಗೇಟ್‌ಗಳು ತೆರೆಯುತ್ತಿದ್ದಂತೆ ಜನರು ಒಳಗೆ ಬರಲು ಒಬ್ಬರ ಮೇಲೆ ಒಬ್ಬರು ಬಿದ್ದು ಮುನ್ನುಗ್ಗಲು ಪ್ರಯತ್ನಿಸಿದಾಗ ಮಹಿಳೆಯೊಬ್ಬರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಹಿಂದೆ ಇದ್ದವರು ಸಹ ಕೆಳಗೆ ಬಿದ್ದಿದ್ದಾರೆ. ಈ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


