5 ಲಕ್ಷ ಮುಸ್ಲಿಂ ಮನೆಗಳು, ಮದರಸಾ, ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಬಿಜೆಪಿ ತಯಾರಿ
ಸ್ವಾತಂತ್ರ್ಯದ ಅಮೃತ ಮಹೋತ್ಸವದ 'ಹರ್ ಘರ್ ತಿರಂಗಾ' ಅಭಿಯಾನದ ಅಂಗವಾಗಿ ಆಗಸ್ಟ್ 15 ರಂದು ಸುಮಾರು 5 ಲಕ್ಷ ಮುಸ್ಲಿಂ ಮನೆಗಳು, ಮದರಾಸ ಮತ್ತು ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಉತ್ತರ ಪ್ರದೇಶ ಬಿಜೆಪಿ ನಿರ್ಧರಿಸಿದೆ. ಆಗಸ್ಟ್ 12 ರಿಂದ ಮೂರು ದಿನ ಬಿಜೆಪಿ ಮುಸ್ಲಿಂ ಮೋರ್ಚಾ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಿದೆ.

ಲಖನೌ: ಸ್ವಾತಂತ್ರ್ಯದ ಅಮೃತ ಮಹೋತ್ಸವದ 'ಹರ್ ಘರ್ ತಿರಂಗಾ' ಅಭಿಯಾನದ ಅಂಗವಾಗಿ ಆಗಸ್ಟ್ 15 ರಂದು ಸುಮಾರು 5 ಲಕ್ಷ ಮುಸ್ಲಿಂ ಮನೆಗಳು, ಮದರಾಸ ಮತ್ತು ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಉತ್ತರ ಪ್ರದೇಶ ಬಿಜೆಪಿ ನಿರ್ಧರಿಸಿದೆ. ಆಗಸ್ಟ್ 12 ರಿಂದ ಮೂರು ದಿನ ಬಿಜೆಪಿ ಮುಸ್ಲಿಂ ಮೋರ್ಚಾ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಿದೆ.
ಮದರಸಾಗಳು ಮತ್ತು ದರ್ಗಾಗಳಲ್ಲಿ ಧ್ವಜಾರೋಹಣ ಮಾಡುವ ಫೋಟೋಗಳನ್ನು ಕ್ಲಿಕ್ ಮಾಡಿ ಮತ್ತು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವಂತೆ ಬಿಜೆಪಿ ಅಲ್ಪಸಂಖ್ಯಾತ ಘಟಕ ಹೇಳಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಯೋಜನೆಯನ್ನು ದೃಢಪಡಿಸಿರುವ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಕುನ್ವರ್ ಬಸಿತ್ ಅಲಿ, ಮದರಸಾ ಮತ್ತು ದರ್ಗಾಗಳಲ್ಲಿ ಹೆಚ್ಚಿನ ಜನ ಸೇರುವುದರಿಂದ ಸಂದೇಶವನ್ನು ಹರಡಲು ನೆರವಾಗುವುದರಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
2017ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಸ್ವಾತಂತ್ರ್ಯ ದಿನದಂದು ರಾಜ್ಯದ ಮದರಸಾಗಳಲ್ಲಿ ಧ್ವಜಾರೋಹಣ ಮತ್ತು ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿತ್ತು ಎಂದು ಅಲಿ ಹೇಳಿದರು. ಬಿಜೆಪಿ ಮೂಲಗಳ ಪ್ರಕಾರ, ರಾಜ್ಯದಲ್ಲಿ 4 ಕೋಟಿಗೂ ಹೆಚ್ಚು ಮನೆಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ ಹೊಂದಲಾಗಿದೆ.
ಈ ಮಧ್ಯೆ ಆಡಳಿತ ಪಕ್ಷದ ಈ ಯೋಜನೆಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ, ಇದು ತ್ರಿವರ್ಣ ಧ್ವಜವನ್ನು ರಾಜಕೀಯಗೊಳಿಸುವ ತಂತ್ರ ಎಂದು ಬಣ್ಣಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


