ಬಿಹಾರದಲ್ಲಿ ಮಹಾಘಟಬಂಧನ್ 2.0: ನಿತೀಶ್ ನೂತನ ಸರ್ಕಾರದಲ್ಲಿ ತೇಜಸ್ವಿ ಯಾದವ್ ಡಿಸಿಎಂ?
ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.

ಪಾಟ್ನಾ: ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.
ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳ ನಡುವಿನ ಮೊದಲ ಮೈತ್ರಿ ಮುರಿದು ಬಿದ್ದ ಸ್ಥಳದಲ್ಲಿ ಮಹಾಘಟಬಂಧನ್ 2.0 ಪ್ರಾರಂಭವಾಗಲಿದೆ ಎಂದು ಲಾಲು ಯಾದವ್ ಪಕ್ಷದ ಮೂಲಗಳು ಸೂಚಿಸಿವೆ. ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಮರಳಲಿದ್ದಾರೆ ಮತ್ತು ಅವರ ಹಿರಿಯ ಸಹೋದರ ತೇಜ್ ಪ್ರತಾಪ್ ಯಾದವ್ ಅವರು ಸಂಪುಟದಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯೊಂದಿಗಿನ ನಿತೀಶ್ ಕುಮಾರ್ ಅವರ ವಿಘಟನೆಯನ್ನು ರಕ್ತರಹಿತ ದಂಗೆ ಎಂದು ಬಣ್ಣಿಸಲಾಗಿದ್ದರೂ, ಸರ್ಕಾರದ ವಿಭಜನೆಯ ಹಾದಿ ಮತ್ತು ಮುಂದಿನ ಸರ್ಕಾರದ ವಿವರಗಳನ್ನು ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರೂಪಿಸಲಾಗುತ್ತಿತ್ತು ಎಂದು ಮೂಲಗಳು ಸೂಚಿಸಿವೆ.
ಮೇ ತಿಂಗಳಲ್ಲಿ ನಿತೀಶ್ ಕುಮಾರ್ ಅವರು ತೇಜಸ್ವಿ ಯಾದವ್ ಅವರ ಮನೆಗೆ ಇಫ್ತಾರ್ ಕೂಟಕ್ಕಾಗಿ ಸೇರಿದಾಗಲೇ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಬೀಳುವ ಲಕ್ಷಣಗಳು ಗೋಚರವಾಗಿದ್ದವು. ಅದರ ನಂತರ ನಿತೀಶ್ ಕುಮಾರ್ ಅವರ ಇಫ್ತಾರ್ ಕೂಟದಲ್ಲಿ ತೇಜಸ್ವಿ ಯಾದವ್ ಭಾಗಿಯಾದ ಬಳಿಕ ರಾಜಕೀಯ ಅಂಗಳದಲ್ಲಿ ಇಬ್ಬರ ಭೇಟಿಯ ಚರ್ಚೆ ಜೋರಾಯಿತು.
ಇಂದು ಸಂಜೆ 4 ಗಂಟೆಗೆ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು ಹೊಸ ಸರ್ಕಾರ ರಚನೆಯಲ್ಲಿ ಯಾರಿರಲಿದ್ದಾರೆ ಎಂಬುದು ಗೊತ್ತಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


