ದೇಶ

ದೇಶದ‌ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಉದಯ್ ಉಮೇಶ್ ಲಲಿತ್ ನೇಮಕ

ದೇಶದ‌ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ.

ದೇಶದ‌ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಉದಯ್ ಉಮೇಶ್ ಲಲಿತ್ ನೇಮಕ
ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್
Published On :

ನವದೆಹಲಿ: ದೇಶದ‌ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತಂತೆ ಕೇಂದ್ರ ಕಾನೂನು ಸಚಿವಾಲಯ ಮಾಹಿತಿ ನೀಡಿದ್ದು, ದೇಶದ‌ 49ನೇ ಸಿಜೆಐಯಾಗಿ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.  

ಶೀಘ್ರವೇ ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದ್ದು, ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಲಲಿತ್ ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೋರಾಡಿಸಿದೆ.   

ಎನ್.ವಿ.ರಮಣ ಸೇವಾವಧಿ ಅಂತ್ಯ ಬಳಿಕ ಸಿಜೆಐ ಆಗಿ ಪದಗ್ರಹಣ ಮಾಡಲಿದ್ದಾರೆ. ಸಿಜೆಐ ರಮಣ ಅವರ ಸೇವಾವಧಿ ಆಗಸ್ಟ್ 26, 2022 ರಂದು ಕೊನೆಗೊಳ್ಳಲಿದ್ದು, ಅಂದೇ ನ್ಯಾ.ಉದಯ್ ಉಮೇಶ್ ಲಲಿತ್ ಅವರು ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.