ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಬನ್ಸಾಲ್ ನೇಮಕ!
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ನಾಯಕ ಸುನಿಲ್ ಬನ್ಸಾಲ್ ರನ್ನು ಆಯ್ಕೆ ಮಾಡಲಾಗಿದೆ.

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ನಾಯಕ ಸುನಿಲ್ ಬನ್ಸಾಲ್ ರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಅಧಿಕೃತ ಘೋಷಣೆ ಹೊರಡಿಸಿದ್ದು, ಬಿಜೆಪಿ ನಾಯಕ ಸುನಿಲ್ ಬನ್ಸಾಲ್ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬುಧವಾರ ನೇಮಿಸಲಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ಬನ್ಸಾಲ್ ಅವರಿಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ತೆಲಂಗಾಣ ರಾಜ್ಯಗಳ ಉಸ್ತುವಾರಿಯನ್ನುಕೂಡ ವಹಿಸಲಾಗಿದೆ ಎನ್ನಲಾಗಿದೆ.
ಸುನಿಲ್ ಬನ್ಸಾಲ್ ಅವರು ಉತ್ತರ ಪ್ರದೇಶದಲ್ಲಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಆಗಿದ್ದರು. ಇದೀಗ ಅವರ ಸ್ಥಾನಕ್ಕೆ ಧರಂಪಾಲ್ ಅವರನ್ನು ನೇಮಿಸಲಾಗುವುದು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ: ಹಲವು ಊಹಾಪೋಹ
ಪಕ್ಷದ ಜಾರ್ಖಂಡ್ ಘಟಕದಲ್ಲಿ ಕರಂವೀರ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


