'ಜೈ ಭೀಮ್' ವಿವಾದ: ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧದ ಎಫ್ ಐಆರ್ ರದ್ದುಪಡಿಸಿದ ಹೈಕೋರ್ಟ್
ತಮಿಳಿನ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ತೋರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಟ ಸೂರ್ಯ ಕುಮಾರ್ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾದ ಎಫ್ ಐಆರ್ ನ್ನು ಮದ್ರಾಸ್ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.

ಚೆನ್ನೈ: ತಮಿಳಿನ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ತೋರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಟ ಸೂರ್ಯ ಕುಮಾರ್ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾದ ಎಫ್ ಐಆರ್ ನ್ನು ಮದ್ರಾಸ್ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.
ಇವರಿಬ್ಬರೂ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ಸಂತೋಷ್ ಕುಮಾರ್ ಈ ತೀರ್ಪು ಪ್ರಕಟಿಸಿದ್ದು, ಎಫ್ ಐಆರ್ ರದ್ದುಪಡಿಸಿದ್ದಾರೆ. ಚಿತ್ರದಲ್ಲಿ ವಣ್ಣಿಯಾರ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ನಗರದ ಚೆನ್ನೈ ಮೂಲದ ವಕೀಲ ಕೆ. ಸಂತೋಷ್ ಮೆಟ್ರೋಪಾಲಿಯನ್ ಮ್ಯಾಜಿಸ್ಟ್ರೇಟ್ ಮೆಟ್ಟಿಲೇರಿದ್ದರು.
ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನ್ಯಾಯಾಲಯ ಮೇ 6 ರಂದು ಆದೇಶ ಹೊರಡಿಸಿತ್ತು. ನಂತರ ವೆಲಾಚೇರಿ ಪೊಲೀಸರು ಮೇ 17 ರಂದು ಸೂರ್ಯ ಮತ್ತು ಜ್ಞಾನವೇಲ್ ರಾಜ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.
ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಕೆ. ಚಂದ್ರು ಅವರು ವಕೀಲರಾಗಿದ್ದಾಗ ನಡೆಸಿದ ಕೇಸ್ ವೊಂದರ ಆಧಾರದ ಮೇಲೆ ಈ ಸಿನಿಮಾ ಮಾಡಲಾಗಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಕೆ ಚಂದ್ರು, ಮಾಜಿ ಐಪಿಪಿ ಪೆರುಮಾಳ ಸ್ವಾಮಿ ಹೆಸರು ಹೊರತುಪಡಿಸಿದರೆ ಉಳಿದ ಎಲ್ಲಾ ಪಾತ್ರಗಳ ಹೆಸರುಗಳನ್ನು ಬದಲಾಯಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


