ಕಾಂಗ್ರೆಸ್ ಮುಖಂಡ ಶಶಿ ತರೂರ್ ಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ
ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಚೆವಲಿಯರ್ ಡೆ ಲಾ ಲೀಜನ್ ಡಿ ಹಾನರ್ ಭಾಜನರಾಗಿದ್ದು, ಪ್ರತಿಷ್ಠಿತ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ಪಕ್ಷದ ಮುಖಂಡರು ಅವರನ್ನು ಅಭಿನಂದಿಸಿದ್ದಾರೆ.

ಪ್ಯಾರಿಸ್: ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಚೆವಲಿಯರ್ ಡೆ ಲಾ ಲೀಜನ್ ಡಿ ಹಾನರ್ ಭಾಜನರಾಗಿದ್ದು, ಪ್ರತಿಷ್ಠಿತ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ಪಕ್ಷದ ಮುಖಂಡರು ಅವರನ್ನು ಅಭಿನಂದಿಸಿದ್ದಾರೆ.
ಶಶಿ ತರೂರ್ ಅವರ ಲೇಖನಗಳು ಮತ್ತು ಭಾಷಣಗಳಿಗಾಗಿ ಫ್ರಾನ್ಸ್ ಸರ್ಕಾರ ಅವರನ್ನು ಪುರಸ್ಕರಿಸುತ್ತಿದೆ. ನವದೆಹಲಿಯಲ್ಲಿನ ಫ್ರೆಂಚ್ ರಾಯಭಾರಿ ಇಮ್ಯಾನುಯೆಲ್ ಲೆನೈನ್ ಪ್ರಶಸ್ತಿ ವಿಷಯವನ್ನು ಶಶಿ ತರೂರ್ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಈ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಟ್ವೀಟರ್ ಮೂಲಕ ಶಶಿ ತರೂರು ಅಭಿನಂದನೆ ಸಲ್ಲಿಸಿದ್ದಾರೆ.
ಫ್ರಾನ್ಸ್ ನೊಂದಿಗಿನ ನಮ್ಮ ಸಂಬಂಧವನ್ನು ಗೌರವಿಸುವ, ಭಾಷೆಯನ್ನು ಪ್ರೀತಿಸುವ ಹಾಗೂ ಸಂಸ್ಕೃತಿಯನ್ನು ಮೆಚ್ಚುವವನಾಗಿ, ನಾನು ಈ ರೀತಿಯಲ್ಲಿ ಗುರುತಿಸಿಕೊಂಡಿರುವುದು ನನಗೆ ಗೌರವವಾಗಿದೆ. ನನಗೆ ಈ ಗೌರವನ್ನು ನೀಡಲು ಸೂಕ್ತವೆಂದು ಕಂಡವರಿಗೆ ನನ್ನ ಕೃತಜ್ಞತೆ ಮತ್ತು ಮೆಚ್ಚುಗೆಗಳು ಎಂದು ಟ್ವೀಟ್ ಮಾಡಿದ್ದಾರೆ.
ಕೇರಳದ ಕಾಂಗ್ರೆಸ್ ಘಟಕ, ಯುವ ಕಾಂಗ್ರೆಸ್ ಘಟಕ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಶಶಿ ತರೂರ್ ಅವರನ್ನು ಅಭಿನಂದಿಸಿದ್ದಾರೆ. ಅತ್ಯುದ್ಬುತ ಶಿಕ್ಷಣ ಮತ್ತು ಅತ್ಯುತ್ತಮ ಜ್ಞಾನಕ್ಕಾಗಿ ಶಶಿ ತರೂರ್ ಪ್ರತಿಷ್ಠಿತ ಫ್ರಾನ್ಸ್ ಸರ್ಕಾರದ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾಗಿರುವುದಾಗಿ ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


