ಪ್ರಧಾನ ಮಂತ್ರಿ ಕಚೇರಿ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾ ಬಂಧನ ಆಚರಿಸಿದ ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಸಣ್ಣ ಪುತ್ರಿಯರಿಂದ ರಾಖಿ ಕಟ್ಟಿಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ ರಕ್ಷಾ ಬಂಧನ ಆಚರಿಸಿದ್ದಾರೆ.

ನವದೆಹಲಿ: ಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಸಣ್ಣ ಪುತ್ರಿಯರಿಂದ ರಾಖಿ ಕಟ್ಟಿಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ ರಕ್ಷಾ ಬಂಧನ ಆಚರಿಸಿದ್ದಾರೆ.
ಪ್ರಧಾನಮಂತ್ರಿಯವರ ನಿವಾಸದಲ್ಲಿ ನಡೆದ ಈ ವಿಶೇಷ ರಕ್ಷಾ ಬಂಧನ ಆಚರಣೆಯಲ್ಲಿ ಭಾಗವಹಿಸಿದವರಲ್ಲಿ ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಕೆಲಸ ಮಾಡುವ ಸ್ವಚ್ಛಗೊಳಿಸುವವರು, ಜವಾನರು, ಗಾರ್ಡನ್ ನೋಡಿಕೊಳ್ಳುವವರು, ಚಾಲಕರು ಮತ್ತು ಇತರರ ಪುಟ್ಟ ಹೆಣ್ಣುಮಕ್ಕಳು ಸೇರಿ ರಕ್ಷಾ ಬಂಧನ ಆಚರಿಸಿದ್ದಾರೆ.
ಸಂಭ್ರಮಾಚರಣೆ ಮತ್ತು ಪುಟಾಣಿ ಮಕ್ಕಳೊಂದಿಗೆ ಪ್ರಧಾನಿಯವರು ಸಂವಾದ ನಡೆಸುತ್ತಿರುವ ವಿಡಿಯೊವನ್ನು ಅಧಿಕಾರಿಗಳು ಹಂಚಿಕೊಂಡಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿ ಮಕ್ಕಳೊಂದಿಗೆ ತೆಗೆಸಿಕೊಂಡಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿ, ಎಲ್ಲರಿಗೂ ರಕ್ಷಾ ಬಂಧನದ ಶುಭಾಶಯ ಕೋರಿದ್ದರು. 'ರಕ್ಷಾ ಬಂಧನದ ವಿಶೇಷ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು' ಎಂದು ಅವರು ಟ್ವೀಟ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


