ಮಧ್ಯ ಪ್ರದೇಶ: ಅಂಗಡಿಗೆ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಅಂಗಡಿಯೊಂದರ ಮೇಲೆ ತ್ರಿವರ್ಣ ಧ್ವಜವನ್ನು ಕಟ್ಟುವ ವೇಳೆ 45 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಖಾರ್ಗೋನ್: ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಅಂಗಡಿಯೊಂದರ ಮೇಲೆ ತ್ರಿವರ್ಣ ಧ್ವಜವನ್ನು ಕಟ್ಟುವ ವೇಳೆ 45 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಜಿಲ್ಲೆಯಿಂದ 80 ಕಿಮೀ ದೂರದಲ್ಲಿರುವ ಬರ್ವಾಹಾ ಪೊಲೀಸ್ ಠಾಣೆ ವ್ಯಾಪ್ತಿಯ ನರ್ಮಲಾ ರಸ್ತೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೋಹನ್ ಪಟೇಲ್ ಎಂಬಾತ, ಕಿರಾಣಿ ಅಂಗಡಿ ಕಟ್ಟಡದ ಮೇಲ್ಬಾಗದಲ್ಲಿದ್ದ ಕಬ್ಬಿಣದ ರಾಡ್‌ಗೆ ರಾಷ್ಟ್ರಧ್ವಜವನ್ನು ಕಟ್ಟುವಾಗ ವಿದ್ಯುತ್ ತಂತಿಗೆ ತಗುಲಿದೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಆತ ಸಾವಿಗೀಡಾಗಿದ್ದಾರೆ ಎಂದು ಬರ್ವಾಹಾ ಪೊಲೀಸ್ ಠಾಣೆಯ ಪ್ರಭಾರಿ ಪ್ರಕಾಶ್ ವಾಸ್ಕಲೆ ತಿಳಿಸಿದ್ದಾರೆ.
ಅವರು ಸ್ಥಳೀಯ ನಿವಾಸಿ ಅಶೋಕ್ ಖಂಡೇಲ್ವಾಲ್ ಅವರ ಮಾಲೀಕತ್ವದ ಕಿರಾಣಿ ಅಂಗಡಿಯಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳಿದರು.
ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸೋಮವಾರ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


