ಕಾಂಗ್ರೆಸ್ ಅಧ್ಯಕ್ಷಗಾದಿ ಅಲಂಕರಿಸಲು ರಾಹುಲ್ ಹಿಂದೇಟು, ಪಕ್ಷದ ನಡೆ ಮುಂದೇನು?
ಕಾಂಗ್ರೆಸ್ ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.
2024 ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವುದಕ್ಕೆ ಸೋನಿಯಾ ಗಾಂಧಿ ಅವರೇ ಕಾಂಗ್ರೆಸ್ ನ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಇಬ್ಬರು ಉಪಾಧ್ಯಕ್ಷರಿರಲಿದ್ದು, ಉತ್ತರ ಭಾರತದ ಉಸ್ತುವಾರಿಯಾಗಿ ಅಶೋಕ್ ಗೆಹ್ಲೋಟ್ ಹಾಗೂ ದಕ್ಷಿಣ ಭಾರತದ ಉಸ್ತುವಾರಿಯಾಗಿ ಚಿದಂಬರಮ್ ಕಾರ್ಯನಿರ್ವಹಿಸಲಿದ್ದಾರೆ.
ಇನ್ನು ಚಿದಂಬರಮ್ ಬದಲಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಉತ್ತಮ ಆಯ್ಕೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಒಂದು ವೇಳೆ ಚಿದಂಬರಂ ಅವರ ಬದಲಿಗೆ ಡಿ.ಕೆ ಶಿವಕುಮಾರ್ ಅವರನ್ನು ನೇಮಕ ಮಾಡಿದರೆ 2023 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಸಿಎಂ ಅಭ್ಯರ್ಥಿ ಕನಸು ನನಸಾಗಲಿದೆ ಎಂದೂ ವಿಶ್ಲೇಷಿಸಲಾಗುತ್ತಿದೆ.
ಇನ್ನು ರಾಹುಲ್ ಗಾಂಧಿ 2024 ರ ಲೋಕಸಭಾ ಚುನಾವಣೆಯ ಬಳಿಕ ಪಕ್ಷದ ಮರುಸಂಘಟನೆಗೆ ನೀಲನಕ್ಷೆ ತಯಾರಿಯಲ್ಲಿ ನಿರತರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


