ದೇಶ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಆಟೋ ರಿಕ್ಷಾಗೆ ಕಾರು ಡಿಕ್ಕಿ; 6 ಮಂದಿ ದುರ್ಮರಣ!

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಕಾರು ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿರೋ ದಾರುಣ ಘಟನೆ ನಡೆದಿದೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಆಟೋ ರಿಕ್ಷಾಗೆ ಕಾರು ಡಿಕ್ಕಿ; 6 ಮಂದಿ ದುರ್ಮರಣ!
ಸಂಗ್ರಹ ಚಿತ್ರ
Published On :

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಕಾರು ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿರೋ ದಾರುಣ ಘಟನೆ ನಡೆದಿದೆ. 

ಮಂಜರಸುಂಬ-ಪಟೋಡ ಹೆದ್ದಾರಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇಜ್ ತಹಸಿಲ್‌ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ವಾಹನ ಮತ್ತು ಟೆಂಪೋ ಪರಸ್ಪರ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಮಂದಿ ರಸ್ತೆಯ ಮೇಲೆ ಪ್ರಾಣಬಿಟ್ಟಿದ್ದಾರೆ.  ಅಪಘಾತದ ಭೀಕರತೆ ಹೇಗಿತ್ತೆಂದರೆ ಎರಡು ವಾಹನಗಳನ್ನು ಬೇರ್ಪಡಿಸಲು ಪೊಲೀಸರು ಕ್ರೇನ್ ಬಳಸಬೇಕಾಯಿತು ಎಂದು ಅವರು ಹೇಳಿದರು.

ಸಂತ್ರಸ್ತರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.