ಮುಂದಿನ 5 ವರ್ಷಗಳಲ್ಲಿ ಉತ್ತರ ಪ್ರದೇಶ ಟ್ರಿಲಿಯನ್ ಡಾಲರ್ ಆರ್ಥಿಕತೆ ರಾಜ್ಯ ಮಾಡಲು ಯೋಗಿ ಸಂಕಲ್ಪ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಂಬರುವ ಐದು ವರ್ಷಗಳಲ್ಲಿ ಉತ್ತರ ಪ್ರದೇಶವನ್ನು ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವನ್ನಾಗಿ ಮಾಡುವ ತಮ್ಮ ಸಂಕಲ್ಪವನ್ನು ಸೋಮವಾರ ಪುನರುಚ್ಚರಿಸಿದ್ದಾರೆ.

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಂಬರುವ ಐದು ವರ್ಷಗಳಲ್ಲಿ ಉತ್ತರ ಪ್ರದೇಶವನ್ನು ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವನ್ನಾಗಿ ಮಾಡುವ ತಮ್ಮ ಸಂಕಲ್ಪವನ್ನು ಸೋಮವಾರ ಪುನರುಚ್ಚರಿಸಿದ್ದಾರೆ.
ಇಂದು ವಿಧಾನ ಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದಿ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯದ ಜನರಿಗೆ ಪ್ರಾಮಾಣಿಕ ಮತ್ತು ಸೂಕ್ಷ್ಮ ಆಡಳಿತವನ್ನು ನೀಡುವ ಭರವಸೆ ನೀಡಿದ್ದಾರೆ. ಸಿಎಂ ತಮ್ಮ ಆದ್ಯತೆಗಳಲ್ಲಿ ‘ಸೇವೆ, ಭದ್ರತೆ ಮತ್ತು ಉತ್ತಮ ಆಡಳಿತ’ವನ್ನೂ ಪಟ್ಟಿ ಮಾಡಿದ್ದಾರೆ.
ನಮ್ಮ ಸರ್ಕಾರ ರಾಜ್ಯದ ಆರ್ಥಿಕತೆಯನ್ನು ನಾಲ್ಕು ಪಟ್ಟು ಹೆಚ್ಚಿಸುವ ಕೆಲಸ ಮಾಡುತ್ತಿದೆ. ಮತ್ತೊಂದು ಕಡೆ ರಾಜ್ಯ ಸರ್ಕಾರ ಪಾರದರ್ಶಕ ಮತ್ತು ಹೊಣೆಗಾರಿಕೆಯ ಆಡಳಿತ ನೀಡಲು ಪ್ರಯತ್ನಿಸಿದೆ, ಆಡಳಿತದಲ್ಲಿ ಪ್ರಾಮಾಣಿಕತೆ ಮತ್ತು ಸೂಕ್ಷ್ಮತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಸಿಎಂ ಹೇಳಿದರು.
ಕಳೆದ ಐದು ವರ್ಷಗಳಲ್ಲಿ, ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಅಡಿಪಾಯವನ್ನು ಹಾಕಲಾಯಿತು ಮತ್ತು ಮುಂದಿನ ಐದು ವರ್ಷಗಳಲ್ಲಿ, ಬೆಳವಣಿಗೆ ಮತ್ತು ಸಮೃದ್ಧಿಯ ಭವ್ಯವಾದ ರಚನೆ ರೂಪುಗೊಳ್ಳುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


