Independence Day: ಟೆಲಿಪ್ರಾಂಪ್ಟರ್ ಬಿಟ್ಟು ಕಾಗದ ಬಳಸಿ ಭಾಷಣ ಮಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳ ಬಳಕೆ ಮಾಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳ ಬಳಕೆ ಮಾಡಿದ್ದಾರೆ.
ಹೌದು.. ಪ್ರಧಾನಿ ಭಾಷಣದಲ್ಲಿ ಇಂದು ಒಂದು ವ್ಯತ್ಯಾಸ ಮುಖ್ಯವಾಗಿ ಎದ್ದು ಕಂಡಿದ್ದು, ಮೋದಿ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳಲ್ಲಿ ಬರೆದಿದ್ದ ಅಂಶಗಳನ್ನು ಆಧರಿಸಿ ಅವರು ಭಾಷಣ ಮಾಡಿದರು. ಈ ಹಿಂದಿನ ಭಾಷಣಗಳಲ್ಲಿ ಮೋದಿ ಅವರು ಟೆಲಿಪ್ರಾಂಪ್ಟರ್ ಬಳಕೆ ಮಾಡುತ್ತಿದ್ದರು. ನೋಡುವವರಿಗೆ ಅವರು ನೇರವಾಗಿ ತಮ್ಮನ್ನೇ ನೋಡುತ್ತಾ ಮಾತನಾಡುತ್ತಿದ್ದಾರೆ ಎನಿಸುವಂತೆ ಇರುತ್ತಿತ್ತು. ಆದರೆ ಈ ಬಾರಿ ಅವರು ಆಗಾಗ ಕಾಗದದ ಚೀಟಿಗಳನ್ನು ನೋಡುತ್ತಾ, ಭಾಷಣ ಮುಂದುವರಿಸಿದರು.
ಆಜಾದಿ ಕಾ ಅಮೃತ್ ಮಹೋತ್ಸವದ ಬ್ಯಾನರ್ ಅಡಿಯಲ್ಲಿ ದೇಶದಲ್ಲಿ ಆಚರಿಸಲಾಗುತ್ತಿರುವ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ದೇಶವಾಸಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸುತ್ತಿದ್ದಂತೆ ಟೆಲಿಪ್ರಾಂಪ್ಟರ್ ಅನ್ನು ಪಕ್ಕಕ್ಕೆ ಹಾಕಲಾಯಿತು.
ಗಮನ ಸೆಳೆದ ಮೋದಿ ವಸ್ತ್ರ
ರಾಷ್ಟ್ರೀಯ ಧ್ವಜದ ಚಿತ್ರವಿರುವ ಪೇಟ, ಬಿಳಿ ಜುಬ್ಬಾ- ಪೈಜಾಮದ ಮೇಲೆ ನೀತಿ ಬಣ್ಣದ ನೆಹರೂ ಜಾಕೆಟ್ ತೊಟ್ಟು ಮೋದಿ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು. ಮೋದಿಯವರ ಬಿಳಿ ಕುರ್ತಾ ಮತ್ತು ನೀಲಿ ಜಾಕೆಟ್ ಹಾಗೂ ಅದಕ್ಕೊಪ್ಪುವ ವಿಶೇಷ ವಿನ್ಯಾಸದ ಪೇಟ ಗಮನ ಸೆಳೆಯಿತು. ಸ್ವಾತಂತ್ರ್ಯ ದಿನಾಚರಣೆಯ ಭಾಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿಶಿಷ್ಟ ಉಡುಪುಗಳು ಯಾವಾಗಲೂ ರಾಷ್ಟ್ರದ ಗಮನವನ್ನು ಸೆಳೆಯುತ್ತವೆ.
ಈ ವರ್ಷ ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮೋದಿ ಸಾಂಪ್ರದಾಯಿಕ ಕುರ್ತಾ ಮತ್ತು ನೀಲಿ ಜಾಕೆಟ್ ಮತ್ತು ಪೇಟವನ್ನು ಧರಿಸಿದ್ದರು. ಐತಿಹಾಸಿಕ ಕೆಂಪು ಕೋಟೆಯ ಮೇಲೆ ಮೋದಿ ‘ತಿರಂಗ’ ಧ್ವಜವನ್ನು ಹಾರಿಸಿದರು. ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


