ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಭಯೋತ್ಪಾದಕರ ದಾಳಿ; ಗ್ರೆನೇಡ್ ತೂರಿದ ಉಗ್ರರು- ಒರ್ವ ಪೊಲೀಸ್ ಸಿಬ್ಬಂದಿಗೆ ಗಾಯ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ.
ಒಂದು ಗಂಟೆಯ ಅವಧಿಯಲ್ಲಿ ಸತತ ಎರಡು ಗ್ರೆನೇಡ್ ದಾಳಿ ನಡೆದಿದ್ದು, ಓರ್ವ ಪೋಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮತ್ತೊಂದು ದಾಳಿಯಲ್ಲಿ ಭಯೋತ್ಪಾದಕರು ಬದ್ಗಾಮ್ ನ ಗೋಪಾಲ್ ಪೋರ ಚದೂರ ಪ್ರದೇಶದಲ್ಲಿ ಗ್ರೆನೇಡ್ ದಾಳಿ ನಡೆದಿದ್ದು, ಕರಣ್ ಕುಮಾರ್ ಸಿಂಗ್ ಎಂಬ ಓರ್ವ ಜನಸಾಮಾನ್ಯ ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ವ್ಯಕ್ತಿಯನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ, ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


