ದೇಶ

ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಸುಭಾಶ್ ಸಿಂಗ್ ಇನ್ನಿಲ್ಲ

ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಮತ್ತು ಬಿಹಾರದ ಮಾಜಿ ಸಚಿವ ಸುಭಾಶ್ ಸಿಂಗ್ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಸುಭಾಶ್ ಸಿಂಗ್ ಇನ್ನಿಲ್ಲ
ಬಿಜೆಪಿ ಶಾಸಕ ಸುಭಾಷ್ ಸಿಂಗ್
Published On :

ಪಾಟ್ನಾ: ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಮತ್ತು ಬಿಹಾರದ ಮಾಜಿ ಸಚಿವ ಸುಭಾಶ್ ಸಿಂಗ್ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

59 ವರ್ಷದ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ, ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.

ಗೋಪಾಲ್‌ಗಂಜ್ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದ ಸಿಂಗ್, ಎನ್‌ಡಿಎ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಕಳೆದ ವಾರವಷ್ಟೇ ಅನಾರೋಗ್ಯಕ್ಕೆ ತುತ್ತಾಗಿದ್ದರು. ಸಿಂಗ್ ಅವರ ಸಾವಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿಂಗ್ ಅವರ ಪುತ್ರನೊಂದಿಗೆ ಫೋನ್‌ ಮೂಲಕ ನಿತೀಶ್ ಕುಮಾರ್ ಅವರು ಮಾತನಾಡಿದ್ದು, ರಾಜ್ಯ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.