ಪಂಜಾಬ್ ಪೊಲೀಸ್ ಅಧಿಕಾರಿಗಳ ವಾಹನದಲ್ಲಿ ಐಇಡಿ ಇರಿಸಿದ್ದ ಇಬ್ಬರ ಬಂಧನ
ಪೊಲೀಸ್ ಅಧಿಕಾರಿಯ ವಾಹನದ ಕೆಳಗೆ ಐಇಡಿ ಪತ್ತೆಯಾದ ಪ್ರಕರಣದಲ್ಲಿ ಪಂಜಾಪ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಅಮೃತ್ ಸರ: ಪೊಲೀಸ್ ಅಧಿಕಾರಿಯ ವಾಹನದ ಕೆಳಗೆ ಐಇಡಿ ಪತ್ತೆಯಾದ ಪ್ರಕರಣದಲ್ಲಿ ಪಂಜಾಪ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧನಕ್ಕೊಳಗಾಗಿರುವ ಇಬ್ಬರು ಸ್ಫೋಟಕವನ್ನು ಇರಿಸಿದ್ದರು. ಬಂಧನಕ್ಕೊಳಗಾಗಿರುವ ಇಬ್ಬರೂ ತರ್ನ್ ತರನ್ ಜಿಲ್ಲೆಯ ಪಟ್ಟಿ ಪ್ರದೇಶದ ನಿವಾಸಿಗಳಾಗಿದ್ದಾರೆ.
ರಂಜಿತ್ ಅವೆನ್ಯೂ ಪ್ರದೇಶದಲ್ಲಿ ಸಬ್ ಇನ್ಸ್ಪೆಕ್ಟರ್ ದಿಬಾಘ್ ಸಿಂಗ್ ಅವರ ಎಸ್ ಯುವಿ ಅಡಿಯಲ್ಲಿ ಸ್ಫೋಟಕ ಸಾಧನ ಪತ್ತೆಯಾಗಿತ್ತು. ಕಾರ್ ಕ್ಲೀನರ್ ಈ ಸ್ಫೋಟಕವನ್ನು ಪತ್ತೆ ಮಾಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಇಬ್ಬರು ದ್ವಿಚಕ್ರ ವಾಹನ ಸವಾರರು ಎಸ್ ಯುವಿ ಅಡಿಯಲ್ಲಿ ಸ್ಫೋಟಕ ಇರಿಸಿ ಪರಾರಿಯಾಗಿದ್ದು ದಾಖಲಾಗಿತ್ತು.
ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪ್ರಧಾನ ನಿರ್ದೇಶಕ ಆರ್ ಎನ್ ಡೋಕೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಸುಧಾರಿತ ಸ್ಫೋಟಕ ಸಾಧನ ಅಂದಾಜು 2.70 ಕೆಜಿಯಷ್ಟು ತೂಕವಿತ್ತು ಹಾಗೂ ಆರ್ ಡಿಎಕ್ಸ್, ಟೈಮರ್ ನ್ನು ಒಳಗೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


