ಕೋವಿಡ್-19: 24 ಗಂಟೆಗಳಲ್ಲಿ ದೇಶದಲ್ಲಿ 9,062 ಸೋಂಕು ಪ್ರಕರಣ ಪತ್ತೆ, 15,220 ಸೋಂಕಿತರ ಚೇತರಿಕೆ
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 9,062 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 15,220 ಸೋಂಕಿತರು ಚೇತರಿಕೆಯಾಗಿದ್ದಾರೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 9,062 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 15,220 ಸೋಂಕಿತರು ಚೇತರಿಕೆಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 9,062 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 15,220 ಸೋಂಕಿತರು ಚೇತರಿಕೆಯಾಗಿದ್ದಾರೆ. ಆ ಮೂಲಕ ದೇಶದಲ್ಲಿ 4,36,54,064 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಪ್ರಸ್ತುತ ದೇಶದಲ್ಲಿ 1, 05, 058 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 25,90,557 ಡೋಸ್ ಕೋವಿಡ್ ಲಸಿಕೆಗಳನ್ನು ನಿರ್ವಹಿಸಲಾಗಿದ್ದು, ದೇಶವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 208.57 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3, 64, 038 ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


