ಮಕ್ಕಳಿಗೆ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಬದಲಾವಣೆ ಇಲ್ಲ: ರೈಲ್ವೆ
ಮಕ್ಕಳಿಗೆ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಯಾವುದೇ ಬದಲಾವಣೆಯನ್ನೂ ಮಾಡಲಾಗಿಲ್ಲ ಎಂದು ರೈಲ್ವೆ ಸ್ಪಷ್ಟನೆ ನೀಡಿದೆ.

ಮಕ್ಕಳಿಗೆ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಯಾವುದೇ ಬದಲಾವಣೆಯನ್ನೂ ಮಾಡಲಾಗಿಲ್ಲ ಎಂದು ರೈಲ್ವೆ ಸ್ಪಷ್ಟನೆ ನೀಡಿದೆ.
1-4 ವಯಸ್ಸಿನ ಮಕ್ಕಳಿಗೆ ಇನ್ನು ಮುಂದೆ ವಯಸ್ಕರಿಗೆ ವಿಧಿಸಲಾಗುವ ದರಗಳನ್ನೇ ವಿಧಿಸಲಾಗುತ್ತದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ರೈಲ್ವೆ ಈ ಸ್ಪಷ್ಟನೆ ನೀಡಿದೆ.
ಮಾ.6,2020 ರಂದು ಪ್ರಕಟಗೊಂಡಿದ್ದ ರೈಲ್ವೆ ಸುತ್ತೋಲೆಯಲ್ಲಿ 5 ವರ್ಷಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದೆ. ಆದರೆ ಪ್ರತ್ಯೇಕವಾಗಿ ಆಸನ ವ್ಯವಸ್ಥೆ ಇರುವುದಿಲ್ಲ ಎಂದೂ ಸ್ಪಷ್ಟನೆ ನೀಡಿದೆ.
5 ವರ್ಷಗಳಿಗಿಂತಲೂ ಕಡಿಮೆ ಇರುವ ಮಕ್ಕಳಿಗೆ ಪ್ರಯಾಣಿಕರು ಆಸನದ ವ್ಯವಸ್ಥೆಯಾಗಬೇಕು ಎಂದಲ್ಲಿ ಟಿಕೆಟ್ ಗಳನ್ನು ಖರೀದಿಸಬಹುದು ಆಗ ಮಾತ್ರ ವಯಸ್ಕರಿಗೆ ಅನ್ವಯಿಸುವ ದರ ಅನ್ವಯವಾಗಲಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


