ದೇಶ

ವಿಮಾನದಲ್ಲಿ ಮಾಸ್ಕ್ ಹಾಕದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಡಿಜಿಸಿಎ

ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರು ವಿಮಾನಗಳಲ್ಲಿ ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ತಿಳಿಸಿದೆ.

ವಿಮಾನದಲ್ಲಿ ಮಾಸ್ಕ್ ಹಾಕದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಡಿಜಿಸಿಎ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರು ವಿಮಾನಗಳಲ್ಲಿ ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ತಿಳಿಸಿದೆ. 

ಪ್ರಯಾಣಿಕರು ಕೋವಿಡ್ ನಿರ್ದೇಶನಗಳನ್ನು ಅನುಸರಿಸದಿದ್ದಲ್ಲಿ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತವೆ.

ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನಯಾನ ಸಂಸ್ಥೆಗಳು ಮತ್ತು ಪ್ರಯಾಣಿಕರ ಮೇಲೆ ತಪಾಸಣೆ ನಡೆಸಲಾಗುವುದು ಎಂದು ಡಿಜಿಸಿಎ ತಿಳಿಸಿದೆ.

ಪ್ರಯಾಣದ ಉದ್ದಕ್ಕೂ ಪ್ರಯಾಣಿಕರು ಫೇಸ್ ಮಾಸ್ಕ್ ಗಳನ್ನು ಸರಿಯಾಗಿ ಧರಿಸಿರುವುದನ್ನು ವಿಮಾನಯಾನ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು ಎಂದು ಡಿಜಿಸಿಎ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.