ಎನ್ಎಸ್ಎ ದೋವಲ್ ನಿವಾಸದ ಬಳಿ ಭದ್ರತಾ ಲೋಪ; ಮೂವರು ಸಿಐಎಸ್ಎಫ್ ಕಮಾಂಡೋಗಳು ಸೇವೆಯಿಂದ ವಜಾ
ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ನಿವಾಸದಲ್ಲಿ ಭದ್ರತಾ ಲೋಪ ಉಂಟಾದ ಪರಿಣಾಮ ಮೂವರು ಸಿಐಎಸ್ಎಫ್ ಕಮಾಂಡೋಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ನಿವಾಸದಲ್ಲಿ ಭದ್ರತಾ ಲೋಪ ಉಂಟಾದ ಪರಿಣಾಮ ಮೂವರು ಸಿಐಎಸ್ಎಫ್ ಕಮಾಂಡೋಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಇದೇ ವಿಷಯವಾಗಿ ವಿಐಪಿ ಭದ್ರತಾ ವಿಭಾಗದ ಇಬ್ಬರು ಹಿರಿಯ ಆಧಿಕಾರಿಗಳನ್ನೂ ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರದ ವಿಐಪಿ ಭದ್ರತೆಯಲ್ಲಿ ಪಟ್ಟಿಯಲ್ಲಿ ದೋವಲ್ ಗೆ ಸಿಐಎಸ್ಎಫ್ ನ ಎಸ್ಎಸ್ ಜಿ ವಿಭಾಗದ ಝೆಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ. ಫೆ.16 ರಂದು ನಡೆದ ಘಟನೆಯಲ್ಲಿ ಸಿಐಎಸ್ಎಫ್ ಕೋರ್ಟ್ ಆಫ್ ಎನ್ಕ್ವೈರಿಯಲ್ಲಿ ಅಧಿಕಾರಿಗಳ ಕರ್ತವ್ಯ ಲೋಪ ದೃಢಪಟ್ಟಿದ್ದು, ಅವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


