ಮುಖ್ತಾರ್ ಅನ್ಸಾರಿ, ಸಹೋದರ ಬಿಎಸ್‌ಪಿ ಸಂಸದ ಅಫ್ಜಲ್ ಅನ್ಸಾರಿ ನಿವಾಸಗಳ ಮೇಲೆ ಇಡಿ ದಾಳಿ
ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಬಿಎಸ್‌ಪಿ ಸಂಸದ ಅಫ್ಜಲ್ ಅನ್ಸಾರಿ ಹಾಗೂ ಅವರ ಸಹೋದರ, ಮಾಫಿಯಾ ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ಸೇರಿದ ದೆಹಲಿ ಮತ್ತು ಉತ್ತರ...

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಬಿಎಸ್‌ಪಿ ಸಂಸದ ಅಫ್ಜಲ್ ಅನ್ಸಾರಿ ಹಾಗೂ ಅವರ ಸಹೋದರ, ಮಾಫಿಯಾ ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ಸೇರಿದ ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿರುವ ನಿವಾಸ, ಕಚೇರಿಗಳ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಸಿಆರ್‌ಪಿಎಫ್ ಭದ್ರತಾ ಬೆಂಗಾವಲು ಪಡೆಯೊಂದಿಗೆ ಇಡಿ ಅಧಿಕಾರಿಗಳು ಕೇಂದ್ರ ದೆಹಲಿಯ ಜನಪಥ್‌ನಲ್ಲಿರುವ ಗಾಜಿಪುರ ಶಾಸಕರ ಸರ್ಕಾರಿ ನಿವಾಸದ ಮೇಲೆ ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.
ಮುಖ್ತಾರ್ ಅನ್ಸಾರಿ ಮತ್ತು ಅವರ ಆಪಾದಿತ ಸಹಚರರಿಗೆ ಸಂಬಂಧಿಸಿದ ದೆಹಲಿ, ಉತ್ತರ ಪ್ರದೇಶದ ಗಾಜಿಪುರ, ಮೊಹಮ್ಮದಾಬಾದ್(ಗಾಜಿಪುರ ಜಿಲ್ಲೆ), ಮೌ ಮತ್ತು ರಾಜ್ಯ ರಾಜಧಾನಿ ಲಖನೌ ಸೇರಿದಂತೆ ಒಟ್ಟು 11 ಕಡೆ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮುಖ್ತಾರ್ ಅನ್ಸಾರಿ ಮತ್ತು ಅವರ ಸಹಚರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸಲು ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಐದು ಬಾರಿ ಶಾಸಕರಾಗಿರುವ ಮುಖ್ತಾರ್ ಅನ್ಸಾರಿ ಪ್ರಸ್ತುತ ಉತ್ತರ ಪ್ರದೇಶದ ಬಂದಾ ಜೈಲಿನಲ್ಲಿದ್ದಾರೆ.
ಭೂಕಬಳಿಕೆ, ಕೊಲೆ ಮತ್ತು ಸುಲಿಗೆ ಆರೋಪಗಳು ಸೇರಿದಂತೆ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ವಿರುದ್ಧ ಕನಿಷ್ಠ 49 ಕ್ರಿಮಿನಲ್ ಮೊಕದ್ದಮೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


