ದೇಶ

ರಜೆ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬೈಕ್‌ನಲ್ಲಿ ಬಂದು ಗುಂಡಿಟ್ಟು ಕೊಂದ ಇಬ್ಬರು!

ಇಂದು ಬೆಳಗ್ಗೆ ಪಾಟ್ನಾದ ಜನನಿಬಿಡ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ರಜೆ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ರಜೆ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬೈಕ್‌ನಲ್ಲಿ ಬಂದು ಗುಂಡಿಟ್ಟು ಕೊಂದ ಇಬ್ಬರು!
ಸಾಂದರ್ಭಿಕ ಚಿತ್ರ
Published On :

ಪಾಟ್ನಾ: ಇಂದು ಬೆಳಗ್ಗೆ ಪಾಟ್ನಾದ ಜನನಿಬಿಡ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ರಜೆ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಅರುಣಾಚಲ ಪ್ರದೇಶದಲ್ಲಿ ನಿಯೋಜಿತರಾಗಿದ್ದ ಯೋಧ ಬಬ್ಲು ಕುಮಾರ್ ರಜೆಯ ಮೇಲೆ ಮನೆಗೆ ಬಂದಿದ್ದರು.

ಯೋಧನು ತನ್ನ ಸಹೋದರನೊಂದಿಗೆ ನಗರದ ಪಶ್ಚಿಮ ತುದಿಯಲ್ಲಿರುವ ಪಟ್ಲಿಪುತ್ರ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ವಿಳಾಸ ಕೇಳುವಂತೆ ನಟಿಸಿದ್ದಾರೆ. ಅವರಿಗೆ ಸಹಾಯ ಮಾಡಲು ಬೈಕ್ ನಿಲ್ಲಿಸಿದಾಗ ತಲೆಗೆ ಗುಂಡು ಹಾರಿಸಿದ್ದಾರೆ. ಬಳಿಕ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆ ವ್ಯಕ್ತಿಗಳು ಕುಮಾರ್ ಅವರ ಸೋದರನ ಮೇಲೂ ಗುಂಡು ಹಾರಿಸಲು ಪ್ರಯತ್ನಿಸಿದರು. ಆದರೆ, ಅವರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಪಾಟ್ನಾ ಎಸ್‌ಎಸ್‌ಪಿ ಮಾನವಜೀತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.