ಘಾಜಿಯಾಬಾದ್: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ
ಘಾಜಿಯಾಬಾದ್ ನಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಘಾಜಿಯಾಬಾದ್: ಘಾಜಿಯಾಬಾದ್ ನಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಓರ್ವ ಯುವಕ 9 ವರ್ಷದ ಬಾಲಕಿ ಹಾಗೂ 6 ವರ್ಷದ ಮಗುವನ್ನು ಅಪಹರಣ ಮಾಡಿದ್ದ, ಆತನೇ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 9 ವರ್ಷದ ಬಾಲಕಿ ಮೃತಪಟ್ಟಿದ್ದು, ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ. ಸ್ಥಳದಿಂದ ಇತರರು ಪರಾರಿಯಾಗಿದ್ದಾರೆ, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ಎಸ್ಎಸ್ ಪಿ ಮುನಿರಾಜ್ ಜಿ ಈ ಬಗ್ಗೆ ಮಾಹಿತಿ ನೀಡಿದ್ದು, ಬಾಲಕಿಯ ಗ್ರಾಮದಲ್ಲೇ ವಾಸವಿದ್ದ ಯುವಕ ಬಾಲಕಿಯರನ್ನು ದ್ವಿಚಕ್ರವಾಹನದಲ್ಲಿ ಸುತ್ತಾಡಿಸಲು ಕರೆದೊಯ್ದಿದ್ದ, ಎಷ್ಟೇ ಹೊತ್ತಾದರೂ ಬಾಲಕಿಯರು ಮನೆಗೆ ಬಾರದೇ ಇದ್ದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿದೆ. ಆರೋಪಿ ತನ್ನ ತಪ್ಪನ್ನು ಪೊಲೀಸ್ ಅಧಿಕಾರಿಗಳ ಎದುರು ಒಪ್ಪಿಕೊಂಡಿದ್ದಾನೆ. ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


