ಕೋವಿಡ್-19: ದೇಶದಲ್ಲಿಂದು 15,754 ಹೊಸ ಪ್ರಕರಣ, ಸೋಂಕಿನಿಂದ 47 ಜನರು ಸಾವು
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 15,754 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,14, 618 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 15,754 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,14, 618 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇಂದು ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳು 1,01,830ಕ್ಕೆ ಇಳಿಕೆಯಾಗಿದೆ.
ಇದೇ ಅವಧಿಯಲ್ಲಿ 47 ಜನರು ಸೋಂಕಿನಿಂದ ಮೃತಪಟ್ಟಿದ್ದು, ಈ ಪೈಕಿ ಕೇರಳವೊಂದರಲ್ಲೇ ಅಧಿಕ 8 ಜನರು ಸಾವಿಗೀಡಾಗಿದ್ದಾರೆ. ಈವರೆಗೆ 5,27,253 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.23ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರ ಶೇ 98.58ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 3.48ರಷ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


