ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಆರು ಮಂದಿ ಬಲಿ, 20 ಕ್ಕೂ ಹೆಚ್ಚು ಜನರಿಗೆ ಗಾಯ: ಪ್ರಧಾನಿ ಮೋದಿ ಸಂತಾಪ
ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ: ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ಹೇಳಿದ್ದಾರೆ.
ಯಾತ್ರಾರ್ಥಿಗಳು ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯದಿಂದ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಶೋಕ ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ಅಪಘಾತ ದುಃಖಕರವಾಗಿದೆ. ಈ ದುಃಖತಪ್ತ ಕುಟುಂಬಗಳೊಂದಿಗೆ ನಾವಿದ್ದೇವೆ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


