ದೇಶ

ನವದೆಹಲಿ: ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಂತರ 12 ಐಎಎಸ್ ಅಧಿಕಾರಿಗಳ ಎತ್ತಂಗಡಿ; ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಆದೇಶ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಡೆದ ಕೆಲ ತಾಸುಗಳಲ್ಲೇ, ರಾಜ್ಯ ರಾಜಧಾನಿ ಆಡಳಿತದಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ಸುಮಾರು 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ನವದೆಹಲಿ: ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಂತರ 12 ಐಎಎಸ್ ಅಧಿಕಾರಿಗಳ ಎತ್ತಂಗಡಿ; ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಆದೇಶ
ಮನೀಶ್ ಸಿಸೋಡಿಯಾ ಮನೆಯಲ್ಲಿ ಸಿಬಿಐ ದಾಳಿ ಚಿತ್ರ
Published On :

ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಡೆದ ಕೆಲ ತಾಸುಗಳಲ್ಲೇ, ರಾಜ್ಯ ರಾಜಧಾನಿ ಆಡಳಿತದಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು,  ಸುಮಾರು 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. 

ದೆಹಲಿ ಸರ್ಕಾರದ ಸೇವೆಗಳ ಇಲಾಖೆ ಹೊರಡಿಸಿದ ವರ್ಗಾವಣೆ ಆದೇಶದ ಪ್ರಕಾರ, ವರ್ಗಾವಣೆಗೊಂಡವರಲ್ಲಿ  ಎಜಿಎಂಯುಟಿ ಕೇಡರ್‌ನ 2007 ರ ಬ್ಯಾಚ್ ಐಎಎಸ್ ಅಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಿಶೇಷ ಕಾರ್ಯದರ್ಶಿ ಉದಿತ್ ಪ್ರಕಾಶ್ ರೈ ಸೇರಿದ್ದಾರೆ. 

ಇತ್ತೀಚೆಗೆ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್‌ಗೆ  ಅನಾವಶ್ಯಕ ಅನುಕೂಲ ಮಾಡಿಕೊಡಲು 50 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು  ಗೃಹ ಸಚಿವಾಲಯಕ್ಕೆ  ಶಿಫಾರಸು ಮಾಡಿದ್ದರು. ರೈ ಅವರನ್ನು ಆಡಳಿತ ಸುಧಾರಣಾ ಇಲಾಖೆಗೆ ವಿಶೇಷ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸ್ತುತ ಸಿಸೋಡಿಯಾ ಅವರು ದೆಹಲಿ ಸರ್ಕಾರದಲ್ಲಿ ಆರೋಗ್ಯ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. 2007ರ ಬ್ಯಾಚ್‌ನ ಐಎಎಸ್ ಅಧಿಕಾರಿ ವಿಜೇಂದ್ರ ಸಿಂಗ್ ರಾವತ್ ಅವರು ರೈ ಅವರ ಸ್ಥಾನಕ್ಕೆ ಬಂದಿದ್ದಾರೆ. ಅವರು ಯೋಜನಾ ನಿರ್ದೇಶಕರ  ಹೆಚ್ಚುವರಿ ಹೊಣೆಗಾರಿಕೆಯನ್ನು ಹೊಂದಿದ್ದಾರೆ.

1990 ರ ಬ್ಯಾಚ್ ಅಧಿಕಾರಿ ಜಿತೇಂದ್ರ ನರೈನ್ ಅವರನ್ನು ದೆಹಲಿ ಹಣಕಾಸು ನಿಗಮದ (ಡಿಎಫ್‌ಸಿ) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಮತ್ತು ನೈಋತ್ಯ ದೆಹಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಮಂತ್ ಕುಮಾರ್ ಅವರಿಗೆ  ಡಿಎಫ್ ಸಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. 

ವಿವೇಕ್ ಪಾಂಡೆ ಅವರನ್ನು (ಐಟಿ) ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಮತ್ತು ಜಿಯೋಸ್ಪೇಷಿಯಲ್ ದೆಹಲಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಕೇಂದ್ರಾಡಳಿತ ಪ್ರದೇಶದ ನಾಗರಿಕ ಸೇವೆಗಳ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಇಲ್ಲಿಯವರೆಗೆ, ಅವರು  ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.