'ಹುಡುಗಿರು ಬಾಯ್ಫ್ರೆಂಡ್ಸ್ ಬದಲಿಸಿದಂತೆ, ನಿತೀಶ್ ಕುಮಾರ್':? ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಜಯವರ್ಗಿಯಾ
ನಿತೀಶ್ ಕುಮಾರ್ ಬಿಜೆಪಿ ಪಕ್ಷವನ್ನು ತೊರೆದು ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ರಚನೆ ಬಗ್ಗೆ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ವ್ಯಂಗ್ಯವಾಡಿದ್ದಾರೆ.

ಇಂದೋರ್: ನಿತೀಶ್ ಕುಮಾರ್ ಬಿಜೆಪಿ ಪಕ್ಷವನ್ನು ತೊರೆದು ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ರಚನೆ ಬಗ್ಗೆ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ವ್ಯಂಗ್ಯವಾಡಿದ್ದಾರೆ.
ನನ್ನ ವಿದೇಶಿ ಸ್ನೇಹಿತನೊಬ್ಬ ಅವರ ದೇಶದಲ್ಲಿ 'ಹುಡುಗಿರು ಆಗಾಗೆ ಬಾಯ್ಫ್ರೆಂಡ್ಸ್ ಗಳನ್ನು ಬದಲಿಸುತ್ತಾರೆ ಎಂದು ಹೇಳಿದ್ದು ಅದೇ ರೀತಿ ಬಿಹಾರದ ಮುಖ್ಯಮಂತ್ರಿ (ನಿತೀಶ್ ಕುಮಾರ್) ಅವರು ಯಾವಾಗ ಹೊಸ ಸಂಬಂಧಕ್ಕೆ ಪ್ರವೇಶಿಸುತ್ತಾರೆ ಎಂದು ಹೇಳುವುದು ಕಷ್ಟ ಎಂದು ಹೇಳಿದ್ದಾರೆ.
ವಿಜಯವರ್ಗಿಯಾ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಪಕ್ಷಗಳು ಕಿಡಿಕಾರುತ್ತಿದ್ದಂತೆ ಇಂದು ವಿಜಯವರ್ಗಿಯಾ ಅವರು ಮಹಿಳೆಯರ ಬಗ್ಗೆ ಅಪಾರ ಗೌರವವಿದೆ. ಬಿಹಾರದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಅವರು ಕೇವಲ ವಿದೇಶಿ ಸ್ನೇಹಿತನ ಮಾತನ್ನು ಉಲ್ಲೇಖಿಸಿದ್ದಾಗಿ, ಆಕ್ಷೇಪಾರ್ಹ ಪದಗಳನ್ನು ಹೇಳಲಿಲ್ಲ ಎಂದು ಹೇಳಿದರು.
ಬಿಹಾರದಲ್ಲಿ(ಜೆಡಿಯು-ಬಿಜೆಪಿಯ) ಸರ್ಕಾರ ಬದಲಾದಾಗ ನಾನು ವಿದೇಶದಲ್ಲಿದ್ದೆ. ಈ ವಿಷಯದ ಬಗ್ಗೆ ಅಲ್ಲಿನ ವ್ಯಕ್ತಿಯೊಬ್ಬರು ನನಗೆ ಹೇಳಿದ್ದರು. ಅಲ್ಲಿ ಹುಡುಗಿಯರು ತಮ್ಮ ಬಾಯ್ಫ್ರೆಂಡ್ಗಳನ್ನು ಆಗಾಗ್ಗೆ ಬದಲಾಯಿಸುತ್ತಾರೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.
ನಿತೀಶ್ ಕುಮಾರ್ ಮಿತ್ರ ಪಕ್ಷ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದುಕೊಂಡು ಮುಖ್ಯಮಂತ್ರಿಯಾಗಿ ಉಳಿಯಲು ಕಾಂಗ್ರೆಸ್ ಮತ್ತು ಎಡ ಪಕ್ಷಗಳನ್ನು ಒಳಗೊಂಡಿರುವ ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ನೇತೃತ್ವದ ಮಹಾ ಮೈತ್ರಿಕೂಟದೊಂದಿಗೆ ಕೈಜೋಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


