26/11 ಮಾದರಿಯಲ್ಲಿ ಮತ್ತೆ ದಾಳಿ: ಅನಾಮಧೇಯ ವ್ಯಕ್ತಿಯಿಂದ ಮುಂಬೈ ಪೊಲೀಸರಿಗೆ ಬೆದರಿಕೆ
26/11 ಮಾದರಿಯಲ್ಲಿ ಮುಂಬೈನಲ್ಲಿ ಮತ್ತೆ ದಾಳಿ ಮಾಡಲಾಗುತ್ತದೆ ಎಂದು ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ.

ಮುಂಬೈ: 26/11 ಮಾದರಿಯಲ್ಲಿ ಮುಂಬೈನಲ್ಲಿ ಮತ್ತೆ ದಾಳಿ ಮಾಡಲಾಗುತ್ತದೆ ಎಂದು ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ.
ಮುಂಬೈ ಮಾದರಿಯಲ್ಲಿ ದಾಳಿ ಮಾಡುವುದಾಗಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂನ ವಾಟ್ಸಪ್ ಗೆ ಪಾಕಿಸ್ತಾನ ಮೂಲದ ನಂಬರ್ ನಿಂದ ಬೆದರಿಕೆ ಸಂದೇಶ ಬಂದಿದ್ದು ಇದು ಆತಂಕ ಸೃಷ್ಟಿಯಾಗಿದೆ. ಮುಂಬೈ ಪೊಲೀಸ್‍ನ ಸಂಚಾರ ವಿಭಾಗದ ಹೆಲ್ಪ್ ಲೈನ್ ಗೆ ಬಂದಿರುವ ಸರಣಿ ಸಂದೇಶಗಳಲ್ಲಿ ಬೆದರಿಕೆ ಹಾಕಲಾಗಿದೆ. ಮೇಲ್ನೋಟಕ್ಕೆ ಈ ಸಂದೇಶ ಪಾಕಿಸ್ತಾನದಿಂದ ಬಂದಿರುವ ಮಾಹಿತಿ ಇದ್ದು, ಮೊಬೈಲ್ ಸಂಖ್ಯೆಯನ್ನು ಬದಲು ಮಾಡಿ, ಇಂಟರ್ನೆಟ್ ಮೂಲಕ ಸಂದೇಶ ಕಳುಹಿಸಲಾಗಿದೆ.
ಅದರಲ್ಲಿ 26/11 ಮಾದರಿಯಲ್ಲಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಲಾಗಿದ್ದು, ವರ್ಲಿಯಲ್ಲಿನ ನಿಯಂತ್ರಣ ಕೊಠಡಿಯಲ್ಲಿ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಸಂದೇಶ ಸ್ವೀಕಾರ್ಹವಾಗಿದೆ. ಸಂದೇಶವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
2008ರ ನವೆಂಬರ್ 26ರಂದು ಪಾಕಿಸ್ತಾನ ಮೂಲದ ಉಗ್ರರು ಮುಂಬೈನಲ್ಲಿ ದಾಳಿ ನಡೆಸಿ, 166 ಮಂದಿಯನ್ನು ಹತ್ಯೆ ಮಾಡಿ, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಪಾಕಿಸ್ತಾನದ 10 ಶಸ್ತ್ರಸಜ್ಜಿತ ಭಯೋತ್ಪಾದಕರು ಮುಂಬೈನಲ್ಲಿ ದಾಳಿ ನಡೆಸಿದ್ದರು. ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ಎನಿಸಿತ್ತು.
ಈ ಕರಾಳ ಘಟನೆ ಮತ್ತೆ ಮರುಕಳಿಸಲಿದೆ ಎಂಬ ಮಾದರಿಯಲ್ಲಿ ಬೆದರಿಕೆ ಹಾಕಲಾಗಿದೆ. ಭಾರತದಲ್ಲಿ 6 ಜನರು ಈ ದಾಳಿಯನ್ನು ಕಾರ್ಯಗತಗೊಳಿಸುತ್ತಾರೆ ಎಂದು ಹೇಳಲಾಗಿದೆ. ಸ್ಥಳವನ್ನು ಟ್ರ್ಯಾಕ್ ಮಾಡಿದಾಗ ಪಾಕಿಸ್ತಾನ ಲೊಕೇಶನ್ ಕಂಡುಬಂದಿದೆ. ಈಗಾಗಲೇ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದು, ಕೇಂದ್ರೀಯ ತನಿಖಾ ಏಜೆನ್ಸಿಗಳಿಗೂ ಮಾಹಿತಿ ನೀಡಲಾಗಿದೆ.
ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಹರಿಹರೇಶ್ವರ ಬೀಚ್‌ನಲ್ಲಿ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದ್ದ ಅನುಮಾನಾಸ್ಪದ ದೋಣಿಯಲ್ಲಿ 3 ಎಕೆ–47 ರೈಫಲ್, ಗುಂಡುಗಳು ಸಿಕ್ಕಿದ್ದವು. ಇದರ ಬೆನ್ನಿಗೇ ಬಂದಿರುವ ಈ ಸಂದೇಶ ಆತಂಕಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


