ದೇಶ

ಹಗರಣದಲ್ಲಿ ಕೇಜ್ರಿವಾಲ್ ಪ್ರಮುಖ ಸಂಚುಕೋರ: ಮನೀಶ್ ಸಿಸೋಡಿಯಾಗೆ ಬಿಜೆಪಿ ತಿರುಗೇಟು

ತಮ್ಮ ಮನೆ ಮೇಲಿನ ಸಿಬಿಐ ದಾಳಿಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.

ಹಗರಣದಲ್ಲಿ ಕೇಜ್ರಿವಾಲ್ ಪ್ರಮುಖ ಸಂಚುಕೋರ: ಮನೀಶ್ ಸಿಸೋಡಿಯಾಗೆ ಬಿಜೆಪಿ ತಿರುಗೇಟು
ಅನುರಾಗ್ ಠಾಕೂರ್, ಮನೀಶ್ ಸಿಸೋಡಿಯಾ
Published On :

ನವದೆಹಲಿ: ತಮ್ಮ ಮನೆ ಮೇಲಿನ ಸಿಬಿಐ ದಾಳಿಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಬಕಾರಿ ನೀತಿಯಡಿ ಭ್ರಷ್ಟಾಚಾರ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಆರೋಪಿಯನ್ನಾಗಿ ಮಾಡಿದ್ದರೂ ಸಹ ಈ ಹಗರಣದ ಪ್ರಮುಖ ಸಂಚುಕೋರ ಸಿಎಂ ಅರವಿಂದ್ ಕೇಜ್ರಿವಾಲ್ ಎಂದು ಆಪಾದಿಸಿದರು. ಇದೇ ವೇಳೆ ಮಾತನಾಡಿದ ಸಂಸದ ಮನೋಜ್ ತಿವಾರಿ ಮತ್ತು ಆದೇಶ್ ಗುಪ್ತಾ, ಮನೀಶ್ ಸಿಸೋಡಿಯಾ ಅವರನ್ನು Money SHH ಎಂದು ಕರೆದರು. 

ಮದ್ಯ ಹಗರಣದಲ್ಲಿ ಸಿಬಿಐ ದಾಳಿ ಬಳಿಕ ಮನೀಶ್ ಸಿಸೋಡಿಯಾ ಅವರ ಮುಖವಾಡ ಕಳಚಿದೆ ಎಂದು ಹೇಳಿದ ಕೇಂದ್ರ ಸಚಿವರು, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಮನೀಶ್ ಸಿಸೋಡಿಯಾ ಅವರಿಗೆ ಸಾಧ್ಯವಾಗಲಿಲ್ಲ. ನಿಮ್ಮ ಮದ್ಯ ನೀತಿ ಸರಿಯಾಗಿದ್ದರೆ ಅದನ್ನು ವಾಪಸ್ ಪಡೆದುಕೊಂಡಿದ್ದೇಕೆ ಎಂದು ಸಿಎಂ ಕೇಜ್ರಿವಾಲ್ ಸರ್ಕಾರವನ್ನು ಪ್ರಶ್ನಿಸಿದರು. ಸಾರಾಯಿ ನೀತಿ ನಿಯಮಗಳಲ್ಲಿ ಭ್ರಷ್ಟಾಚಾರ ಕಂಡುಬಂದಾಗ ಈ ನೀತಿಯನ್ನು ಕೇಜ್ರಿವಾಲ್ ಸರ್ಕಾರ ಹಿಂಪಡೆದಿದ್ದಾರೆ ಎಂದು ಆರೋಪಿಸಿದರು.

Related Article

2024 ಲೋಕಸಭಾ ಚುನಾವಣೆ ಮೋದಿ, ಕೇಜ್ರಿವಾಲ್ ನಡುವಿನ ಹೋರಾಟ: ಮನೀಶ್ ಸಿಸೋಡಿಯಾ

ನವದೆಹಲಿ: ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಂತರ 12 ಐಎಎಸ್ ಅಧಿಕಾರಿಗಳ ಎತ್ತಂಗಡಿ; ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಆದೇಶ

ಅಬಕಾರಿ ಹಗರಣ: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಸಿಬಿಐ ಎಫ್ಐಆರ್

ಸಿಬಿಐಗೆ ಸ್ವಾಗತ, ಆದರೆ ಪಿತೂರಿಯಿಂದ ನನ್ನನ್ನು ಕುಗ್ಗಿಸಲು ಸಾಧ್ಯವಿಲ್ಲ: ಮನೀಶ್ ಸಿಸೋಡಿಯಾ

ಅಬಕಾರಿ ನೀತಿ ಪ್ರಕರಣ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿವಾಸ ಸೇರಿ 21 ಕಡೆಗಳಲ್ಲಿ ಸಿಬಿಐ ದಾಳಿ

ಕ್ಯಾಬಿನೆಟ್, ಲೆಫ್ಟಿನೆಂಟ್ ಗವರ್ನರ್ ಅನುಮತಿ ಇಲ್ಲದೆಯೆ ಮದ್ಯದ ಲಾಬಿ ಪರ ಸಿಸೋಡಿಯಾ ನಿರ್ಧಾರ: ದೆಹಲಿ ಮುಖ್ಯ ಕಾರ್ಯದರ್ಶಿ ವರದಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.